PNB Recruitment 2024: ಬ್ಯಾಂಕ್‌ನಲ್ಲಿ ಉದ್ಯೋಗ ಲಕ್ಷ-ಲಕ್ಷ ಪ್ಯಾಕೇಜ್, ಆಯ್ಕೆ, ಪೋಸ್ಟಿಂಗ್ ಮಾಹಿತಿ ಇಲ್ಲಿದೆ
ಬೆಂಗಳೂರು, ಜನವರಿ 16: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB jobs) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕವಾದ ಫೆಬ್ರವರಿ 4 ರೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವ ಅಭ್ಯರ್ಥಿಗಳು ಈ ಅವಕಾಶ ಸದುಪಯೋಗ ಮಾಡಿಕೊಳ್ಳಬೇಕು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಒಟ್ಟು 8 ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್, ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳು ಖಾಲಿ ಇವೆ. ಆಸಕ್ತರ ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೂ ಕಾಯದೇ ಈ ಕೂಡಲೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಮೊದಲು ಇಲ್ಲಿ ನೀಡಲಾಗಿರುವ ಪರಿಪೂರ್ಣ ಮಾಹಿತಿ ತಿಳಿದು, ಇಲ್ಲವೇ ಅಧಿಸೂಚನೆ ನೋಡಿಕೊಂಡು ಅರ್ಜಿ ಸಲ್ಲಿಸಬೇಕಿದೆ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆಯ ಹೆಸರು: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)
ಹುದ್ದೆ ಹೆಸರು: ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್, ನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್
ಒಟ್ಟು ಖಾಲಿ ಹುದ್ದೆಗಳು: 08
ಮಾಸಿಕ ವೇತನ: ವಾರ್ಷಿಕವಾಗಿ 18 ರಿಂದ 26 ಲಕ್ಷ ಪ್ಯಾಕೇಜ್
ಪೋಸ್ಟಿಂಗ್: ಬೆಂಗಳೂರು ಸೇರಿ ದೇಶದ ವಿವಿಧೆಡೆ
ಅರ್ಜಿ ಸಲ್ಲಿಕೆ ಕೊನೆ ದಿನ: ಪೆಬ್ರುವರಿ 04
ವಿದ್ಯಾರ್ಹತೆ: ನಿಯಮಾನುಸಾರ
ವಯೋಮಿತಿ ವಿವರ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ಪೈಕಿ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗೆ ಗರಿಷ್ಠ 60 ವರ್ಷ ಹಾಗೂ ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗೆ ಗರಿಷ್ಠ 58 ವರ್ಷ ನಿಗದಿ ಮಾಡಲಾಗಿದೆ.

ಹುದ್ದೆಯ ಮಾಹಿತಿ: ವೇತನ ಎಷ್ಟಿದೆ?
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗೆ ಆಯ್ಕೆ ಆಗುವವರಿಗೆ ವಾರ್ಷಿಕವಾಗಿ ಪ್ಯಾಕೇಜ್ ರೂಪದಲ್ಲಿ ನೀಡಲಾಗುತ್ತಿದ್ದು, ಇವರಿಗೆ 22,38,000 ರೂಪಾಯಿ ಇದೆ. ಇನ್ನೂ ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಆಯ್ಕೆ ಆಗುವವರಿಗೆ ವಾರ್ಷಿಕ 18,60,000 ಪ್ಯಾಕೇಜ್ ವೇತನ ನೀಡಲಾಗುವುದು.
ಸಂದರ್ಶನ ಮೂಲಕ ಆಯ್ಕೆ: ಪೋಸ್ಟಿಂಗ್ ವಿವರ
ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಬ್ಯಾಂಕ್ ತಿಳಿಸಿದೆ. ಅಲ್ಲದೇ ಇಲ್ಲಿ ಆಯ್ಕೆ ಆಗುವವರಿಗೆ ಕೈತುಂಬ ಸಂಬಳದ ಜೊತೆಗೆ ಕರ್ನಾಟಕದ ಬೆಂಗಳೂರು, ಶಿಲ್ಲಾಂಗ್, ಭೂಪಾಲ್ ಮತ್ತು ಪುಣೆ ಭಾಗದಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ಬ್ಯಾಂಕ್ ಅಧಿಸೂಚನೆ ತಿಳಿಸಿದೆ.
ಅರ್ಜಿ ಸಲ್ಲಿಕೆಯ ಮಾಹಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳು ಯಾವ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ನೀವು https://www.pnbindia.in/Recruitments.aspx ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ಅಧಿಸೂಚನೆಗೆ ಅಧಿಕೃತ ವೆಬ್ಸೈಟ್ www.pnbindia.in ಗೆ ಭೇಟಿ ನೀಡಬೇಕು ಎಂದು ತಿಳಿಸಲಾಗಿದೆ.
ನೆನಪಿಡಬೇಕಾದ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನ: ಜನವರಿ 15
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನ: ಫೆಬ್ರವರಿ 4












Click it and Unblock the Notifications