Police Constable Recruitment 2023: ಒಟ್ಟು 3,578 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 04: ಪೊಲೀಸ್ ಇಲಾಖೆಯು ತನ್ನಲ್ಲಿ ಖಾಲಿ ಇರುವ 3,578ಕ್ಕೂ ಅಧಿಕ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ನೇಮಕಾತಿ ಪ್ರಾರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿರುವ ಗೃಹ ಇಲಾಖೆ ಆಗಸ್ಟ್ 27ರೊಳಗೆ ಅರ್ಹರು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.
ರಾಜಸ್ಥಾನ ಪೊಲೀಸ್ ಇಲಾಖೆಯು ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು. ಆಸಕ್ತರು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಗಳ ವಿವಿರ, ಪೂರ್ಣ ಮಾಹಿತಿ ತಿಳಿಯಿರಿ.

ರಾಜಸ್ಥಾನ ಪೇದೆ ನೇಮಕಾತಿ ವಿವರ
ಒಟ್ಟು ಖಾಲಿ ಹುದ್ದೆ - 3,578
ಪೊಸ್ಟಿಂಗ್ - ರಾಜಸ್ಥಾನ
ಶೈಕ್ಷಣಿಕ ಅರ್ಹತೆ - 12ನೇ ತರಗತಿ
ಮಾಸಿಕ ವೇತನ - 14,600 ರೂಪಾಯಿ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 12ನೇ ತರಗತಿ ಉತ್ತೀಣವಾಗಿರಬೇಕು. ಅಗತ್ಯ ದಾಖಲೆಗಳ ಸಹಿತ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ರಾಜಸ್ಥಾನ ಪೊಲೀಸ್ ನೇಮಕಾತಿ ಅಧಿಸೂಚನೆ ಹೇಳಿದೆ.
ಅರ್ಜಿ ಶುಲ್ಕದ ವಿವರ
ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಆಸಕ್ತ ಸಾಮಾನ್ಯ/ಬಿಸಿ/ ಇಬಿಸಿ (CL) ಅಭ್ಯರ್ಥಿಗಳಿಗೆ 600 ರೂಪಾಯಿ ಹಾಗೂ EBC/EWS/SC/ST/TSP ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದಾಖಲೆಗಳನ್ನು ಹಿರಿಯ ಅಧಿಕಾರಿಗಳು ಮೊದಲು ಪರಿಶೀಲನೆ ನಡೆಸುತ್ತಾರೆ. ಬಳಿಕ ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡುತ್ತಾರೆ. ಆಯ್ಕೆ ಆಗಿ ಪೋಸ್ಟಿಂಗ್ ಪಡೆಯುವವರಿಗೆ ಮಾಸಿಕವಾಗಿ 14,600 ರೂಪಾಯಿ ಸಂಬಳ ಕೊಡಲಾಗುತ್ತದೆ ಎಂದು ಇಲಾಖೆ ಮಾಹಿತಿ ನೀಡಿದೆ. ಹೆಚ್ಚಿನ ಮಾಹಿತಿಗೆ https://www.police.rajasthan.gov.in/ ವೆಬ್‌ಸೈಟ್‌ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.
ನೆನಪಿಡಬೇಕಾದ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ- 07/08/2023
ಅರ್ಜಿ ಸಲ್ಲಿಕೆಗೆ ಇರುವ ಕೊನೆಯ ದಿನಾಂಕ- ಆಗಸ್ಟ್ 27












Click it and Unblock the Notifications