ಫೆ. 25ಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ, ವಸ್ತ್ರ ಸಂಹಿತೆ

ಬೆಂಗಳೂರು, ಫೆಬ್ರವರಿ 12: 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) 1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಫೆಬ್ರವರಿ 25ರಂದು ನಡೆಯಲಿದೆ.

ಈ ಪರೀಕ್ಷೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರಸಂಹಿತೆಯನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.

Police Constable Recruitment Written Test On February 25 Dress Code Information

ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ. ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸುವಂತಿಲ್ಲ.

ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಮತ್ತು ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುತ್ತದೆ.

ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆಯೊಂದಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+