ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ; ಅಭ್ಯರ್ಥಿಗಳಿಗೆ ಸೂಚನೆ
ಬೆಂಗಳೂರು, ನವೆಂಬರ್ 20 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ನವೆಂಬರ್ 22ರ ಭಾನುವಾರ ಲಿಖಿತ ಪರೀಕ್ಷೆ ನಡೆಯಲಿದೆ.
ಕೆಎಸ್ಆರ್‌ಪಿ ಅಥವ ಐಆರ್‌ಬಿ ಪುರುಷ/ಮಹಿಳಾ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದವರು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ಬರೆಯಬಹುದಾಗಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ಲಿಖಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಕರೆಪತ್ರಗಳನ್ನು ಪಡೆಯಬಹುದಾಗಿದೆ. ಕರೆಪತ್ರಗಳನ್ನು ಪಡೆದ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಬಹುದು.

ಪರೀಕ್ಷಾ ಕೇಂದ್ರಕ್ಕೆ ಬರುವಾಗ ಅಭ್ಯರ್ಥಿಗಳು ಕರೆಪತ್ರದ ಜೊತೆ ಪಾಸ್‍ಪೋರ್ಟ್, ಚಾಲನಾ ಪರವಾನಗಿ, ಪಾನ್‍ಕಾರ್ಡ್, ಸರ್ವೀಸ್ ಐ. ಡಿ. ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಪಹಣಿ ಭಾವಚಿತ್ರದೊಂದಿಗೆ, ಮಾಜಿ ಸೈನಿಕ ಪಿಂಚಣಿ ಪುಸ್ತಕ, ಕಛೇರಿಯ ಗುರುತಿನ ಚೀಟಿ, ಚುನಾವಣಾ ಗುರುತಿನ ಚೀಟಿ ಯಾವುದಾದರೂ ಒಂದು ಮೂಲ ಗುರುತಿನ ಚೀಟಿಯನ್ನು ತರಬೇಕು.
ಲಿಖಿತ ಪರೀಕ್ಷೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸ್ ಇಲಾಖೆ ಅಧಿಕೃತ ವೆಬ್ ಸೈಟ್‌ನಲ್ಲಿ ನೀಡಲಾಗಿದೆ. ವೆಬ್ ಸೈಟ್‌ನಲ್ಲಿ ಲಭ್ಯವಿರುವ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications