ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ಅರ್ಜಿ ಸಲ್ಲಿಕೆ ಸ್ಥಗಿತ

ಬೆಂಗಳೂರು, ಮೇ 30 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ತಾತ್ಕಾಲಿಕವಾಗಿ ಅರ್ಜಿ ಸ್ವೀಕಾರ ಪ್ರಕ್ರಿಯೆ ಸ್ಥಗಿತವಾಗಿದೆ.

Recommended Video

      ಪೊಲೀಸರಿಗೂ ಬಂತು ಕರೋನ, ಉಡುಪಿಯ ಪೊಲೀಸ್ ಠಾಣೆ ಸಹ ಸೀಲ್ ಡೌನ್. | Udupi DC

      ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 431 ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ( ಸಿವಿಲ್, ಕಲ್ಯಾಣ ಕರ್ನಾಟಕ ) 125 ಹುದ್ದೆಗಳ ನೇರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಈ ಕುರಿತು ಆದೇಶ ಹೊರಡಿಸಲಾಗಿದೆ.

      ಜೂನ್ 1ರಿಂದ 30ರ ತನಕ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಸರ್ಕಾರದ ಪತ್ರ ಸಂಖ್ಯೆ ಹೆಚ್‍ಡಿ / 84 ಪಿಪಿಎ / 2020 - ಪಿಎಸ್ ಬಿ 28 ದಿನಾಂಕ 30/05/2020 ರಲ್ಲಿನ ಸೂಚನೆಯಂತೆ ಪ್ರಕ್ರಿಯೆ ಸ್ಥಗಿತವಾಗಿದೆ.

      Police Sub Inspector Recruitment Process Stopped

      ಆಡಳಿತಾತ್ಮಕವಾದ ಕಾರಣಗಳಿಂದಾಗಿ ಅರ್ಜಿ ಸಲ್ಲಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ಅರ್ಜಿ ಆಹ್ವಾನ ದಿನಾಂಕಗಳನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಲಾಗಿದೆ.

      ಮೇ ತಿಂಗಳಿನಲ್ಲಿ ಕರ್ನಾಟಕ ಪೊಲೀಸ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇವುಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳು ಸೇರಿದ್ದವು. ಉಳಿದಂತೆ ಯಾವುದೇ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+