ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ಅರ್ಜಿ ಸಲ್ಲಿಕೆ ಸ್ಥಗಿತ

|
Google Oneindia Kannada News

ಬೆಂಗಳೂರು, ಮೇ 30 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ತಾತ್ಕಾಲಿಕವಾಗಿ ಅರ್ಜಿ ಸ್ವೀಕಾರ ಪ್ರಕ್ರಿಯೆ ಸ್ಥಗಿತವಾಗಿದೆ.

Recommended Video

ಪೊಲೀಸರಿಗೂ ಬಂತು ಕರೋನ, ಉಡುಪಿಯ ಪೊಲೀಸ್ ಠಾಣೆ ಸಹ ಸೀಲ್ ಡೌನ್. | Udupi DC

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 431 ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ( ಸಿವಿಲ್, ಕಲ್ಯಾಣ ಕರ್ನಾಟಕ ) 125 ಹುದ್ದೆಗಳ ನೇರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಈ ಕುರಿತು ಆದೇಶ ಹೊರಡಿಸಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ಸಂದರ್ಶನ ರದ್ದುಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ಸಂದರ್ಶನ ರದ್ದು

ಜೂನ್ 1ರಿಂದ 30ರ ತನಕ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಸರ್ಕಾರದ ಪತ್ರ ಸಂಖ್ಯೆ ಹೆಚ್‍ಡಿ / 84 ಪಿಪಿಎ / 2020 - ಪಿಎಸ್ ಬಿ 28 ದಿನಾಂಕ 30/05/2020 ರಲ್ಲಿನ ಸೂಚನೆಯಂತೆ ಪ್ರಕ್ರಿಯೆ ಸ್ಥಗಿತವಾಗಿದೆ.

ಕರ್ನಾಟಕ ಪೊಲೀಸ್ ವರ್ಗಾವಣೆಯಲ್ಲಿ ಮಹತ್ವದ ಬದಲಾವಣೆಕರ್ನಾಟಕ ಪೊಲೀಸ್ ವರ್ಗಾವಣೆಯಲ್ಲಿ ಮಹತ್ವದ ಬದಲಾವಣೆ

Police Sub Inspector Recruitment Process Stopped

ಆಡಳಿತಾತ್ಮಕವಾದ ಕಾರಣಗಳಿಂದಾಗಿ ಅರ್ಜಿ ಸಲ್ಲಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ಅರ್ಜಿ ಆಹ್ವಾನ ದಿನಾಂಕಗಳನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 26 ಹುದ್ದೆಗಳುಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 26 ಹುದ್ದೆಗಳು

ಮೇ ತಿಂಗಳಿನಲ್ಲಿ ಕರ್ನಾಟಕ ಪೊಲೀಸ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇವುಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳು ಸೇರಿದ್ದವು. ಉಳಿದಂತೆ ಯಾವುದೇ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

English summary
Karnataka police department stopped the recruitment process for the sub-inspector (civil) post. New date will be announce soon said in a press note.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X