ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಬೋಧಕರ ಹುದ್ದೆಗಳ ಭರ್ತಿ

ಬೆಂಗಳೂರು, ಮೇ 16 : ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಿದೆ. ಕರ್ನಾಟಕ ಸರ್ಕಾರ ಬೋಧಕರ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿದೆ.

ಅನುದಾನಿತ ಇಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಮೀಸಲಾತಿ ಪದ್ಧತಿ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಅನುದಾನಿತ ಇಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ವೇತನಾನುದಾನಕ್ಕೆ ಒಳಪಟ್ಟು ರಾಜೀನಾಮೆ, ನಿವೃತ್ತಿ ಅಥವ ಅಕಾಲಿಕ ಮರಣದಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

lecturer post

ಕಾರ್ಯಭಾರ ಇರುವ ಹುದ್ದೆಗಳನ್ನು ಗುರುತಿಸಿ ಆರ್ಥಿಕ ಇಲಾಖೆಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಒಪ್ಪಿಗೆ ಸಿಕ್ಕಿದೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.

ವಿವಿಧ ಹುದ್ದೆ ಭರ್ತಿ : ಮತ್ತೊಂದು ಕಡೆ ಉನ್ನತ ಶಿಕ್ಷಣ ಇಲಾಖೆ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಪ್ರಾಂಶುಪಾಲ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಶೀಘ್ರದಲ್ಲೇ ಕರೆಯಲಿದೆ. 5100 ಉಪನ್ಯಾಸಕ ಮತ್ತು 708 ಪ್ರಾಂಶುಪಾಲ ಹುದ್ದೆ ಭರ್ತಿ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಮುಗಿದಿದೆ. ಆದರೆ, ಮತ ಎಣಿಕೆ ನಡೆಯದ ಕಾರಣ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮೇ 23ರಂದು ಮತ ಎಣಿಕೆ ನಡೆಯಲಿದ್ದು, ಬಳಿಕ ನೀತಿ ಸಂಹಿತೆ ತೆರವಾಗಲಿದೆ. ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+