ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಬೋಧಕರ ಹುದ್ದೆಗಳ ಭರ್ತಿ

|
Google Oneindia Kannada News

ಬೆಂಗಳೂರು, ಮೇ 16 : ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಿದೆ. ಕರ್ನಾಟಕ ಸರ್ಕಾರ ಬೋಧಕರ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿದೆ.

ಅನುದಾನಿತ ಇಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಮೀಸಲಾತಿ ಪದ್ಧತಿ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

5 ಸಾವಿರ ಉಪನ್ಯಾಸಕ, 708 ಪ್ರಾಂಶುಪಾಲ ಹುದ್ದೆಗೆ ಅರ್ಜಿ ಹಾಕಿ5 ಸಾವಿರ ಉಪನ್ಯಾಸಕ, 708 ಪ್ರಾಂಶುಪಾಲ ಹುದ್ದೆಗೆ ಅರ್ಜಿ ಹಾಕಿ

ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಅನುದಾನಿತ ಇಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ವೇತನಾನುದಾನಕ್ಕೆ ಒಳಪಟ್ಟು ರಾಜೀನಾಮೆ, ನಿವೃತ್ತಿ ಅಥವ ಅಕಾಲಿಕ ಮರಣದಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಮಂಡ್ಯದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ, ಅರ್ಜಿ ಹಾಕಿಮಂಡ್ಯದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ, ಅರ್ಜಿ ಹಾಕಿ

lecturer post

ಕಾರ್ಯಭಾರ ಇರುವ ಹುದ್ದೆಗಳನ್ನು ಗುರುತಿಸಿ ಆರ್ಥಿಕ ಇಲಾಖೆಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಒಪ್ಪಿಗೆ ಸಿಕ್ಕಿದೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.

ಧಾರವಾಡ ಕೋರ್ಟ್ ನೇಮಕಾತಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಹಾಕಿಧಾರವಾಡ ಕೋರ್ಟ್ ನೇಮಕಾತಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆ ಭರ್ತಿ : ಮತ್ತೊಂದು ಕಡೆ ಉನ್ನತ ಶಿಕ್ಷಣ ಇಲಾಖೆ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಪ್ರಾಂಶುಪಾಲ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಶೀಘ್ರದಲ್ಲೇ ಕರೆಯಲಿದೆ. 5100 ಉಪನ್ಯಾಸಕ ಮತ್ತು 708 ಪ್ರಾಂಶುಪಾಲ ಹುದ್ದೆ ಭರ್ತಿ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಮುಗಿದಿದೆ. ಆದರೆ, ಮತ ಎಣಿಕೆ ನಡೆಯದ ಕಾರಣ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮೇ 23ರಂದು ಮತ ಎಣಿಕೆ ನಡೆಯಲಿದ್ದು, ಬಳಿಕ ನೀತಿ ಸಂಹಿತೆ ತೆರವಾಗಲಿದೆ. ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ.

English summary
Karnataka Government approved to fill polytechnic lecturer post. Department of technical education will announce notification soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X