ಪವರ್ ಸಿಸ್ಟಮ್ ಆಪರೇಷನ್ ಕಾರ್ಪೊರೇಶನ್‌ನಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಮೇ 31 : ಪವರ್ ಸಿಸ್ಟಮ್ ಆಪರೇಷನ್ ಕಾರ್ಪೊರೇಶನ್ ಲಿಮಿಟೆಡ್ 64 ಎಕ್ಸಿಕ್ಯೂಟೀವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಜೂನ್ 27, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ಪವರ್ ಸಿಸ್ಟಮ್ ಆಪರೇಷನ್ ಕಾರ್ಪೊರೇಶನ್ ಲಿಮಿಟೆಡ್ ಎಕ್ಸಿಕ್ಯೂಟೀವ್ ಟ್ರೈನಿ (ಎಲೆಕ್ಟ್ರಿಕಲ್ 45, ಕಂಪ್ಯೂಟರ್ ಸೈನ್ಸ್ 19) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 64 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್/ಬಿ.ಎಸ್.ಸಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ (ಜುಲೈ 31, 2018)ಕ್ಕೆ ಅನ್ವಯ ವಾಗುವಂತೆ.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications