Post Office Recruitment 2023: ಕೈತುಂಬ ಸಂಬಳದ ಅಂಚೆ ಉದ್ಯೋಗ, ವೇತನ, ಆಯ್ಕೆ ವಿವರ ತಿಳಿದು ಅರ್ಜಿ ಹಾಕಿ
ಬೆಂಗಳೂರು, ಅಕ್ಟೋಬರ್ 29: ಭಾರತೀಯ ಅಂಚೆ ಇಲಾಖೆಯು ತನ್ನ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಅರಸುವ ಅಭ್ಯರ್ಥಿಗಳಿಗೆ ಈ ಉತ್ತಮ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದು.
ಭಾರತೀಯ ಅಂಚೆ ಇಲಾಖೆ (Indian Post Office) ಯಲ್ಲಿ ಒಟ್ಟು 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 24ರೊಳಗಾಗಿ ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮೊದಲು ಈ ನೇಮಕಾತಿ ಕುರಿತು ಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಂಡು ಇಲ್ಲವೇ ಅಧಿಸೂಚನೆ ನೋಡಿ ನಂತರ ಅರ್ಜಿ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ
ಹುದ್ದೆ ಹೆಸರು: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಸ್ಟಾಫ್ ಕಾರ್ ಡ್ರೈವರ್
ಖಾಲಿ ಹುದ್ದೆ ಸಂಖ್ಯೆ: 11
ಮಾಸಿಕ ವೇತನ: ₹19,900-63,200
ಪೋಸ್ಟಿಂಗ್: ಮಧ್ಯ ಪ್ರದೇಶ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ನವೆಂಬರ್ 24
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10 ನೇ ತರಗತಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ತಿಳಿಸಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು 24, 223ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದ್ದು, ಹಿಂದುಳಿದ ಅಭ್ಯರ್ಥಿಗಳಿಗೆ ಓಬಿಸಿ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ/ESM ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ. ಇತರ ಎಲ್ಲ ಅಭ್ಯರ್ಥಿಗಳಿಗೆ 100 ರೂಪಾಯಿ ಇದ್ದು, ಈ ಹಣವನ್ನು ಪೋಸ್ಟಲ್ ಆರ್ಡರ್ ಮೂಲಕ ವೇ ಪಾವತಿಸಬೇಕು ಎಂದು ತಿಳಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ಡ್ರೈವಿಂಗ್ ಲೈಸೆನ್ಸ್, ಡ್ರೈವಿಂಗ್ ಟೆಸ್ಟ್, ಟ್ರೇಡ್ ಟೆಸ್ಟ್, ಥಿಯರಿ ಟೆಸ್ಟ್
ಪ್ರಾಕ್ಟಿಕಲ್ ಪರೀಕ್ಷೆ ನಡೆಯಲಿದೆ. ಇಲ್ಲಿ ಆಯ್ಕೆ ಆಗುವವರಿಗೆ ಮಧ್ಯಪ್ರದೇಶದಲ್ಲಿ ಪೋಸ್ಟಿಂಗ್ ಸಿಗಲಿದೆ.
ಅರ್ಜಿ ಸಲ್ಲಿಕೆ ವಿಳಾಸ
ಅರ್ಜಿಗಳನ್ನು ಅಭ್ಯರ್ಥಿಗಳು ಭರ್ತಿ ಮಾಡಿ ಅಗತ್ಯ ದಾಖಲಾತಿಗಳ ಸಹಿತ ಸಹಾಯಕ ನಿರ್ದೇಶಕ (Estt/Rectt)
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್, ಎಂ.ಪಿ. ವೃತ್ತ, ಭೋಪಾಲ್-462027 ಇಲ್ಲಿಗೆ ಕಳುಹಿಸಬೇಕು ಎಂದು ತಿಳಿಸಲಾಗಿದೆ.












Click it and Unblock the Notifications