Post Office Jobs 2023: ಕರ್ನಾಟಕದಲ್ಲೇ 28 ಹುದ್ದೆ ಖಾಲಿ ಇವೆ, 10ನೇ ತರಗತಿ ಪಾಸಾದವರಿಗೂ ಸರ್ಕಾರಿ ಕೆಲಸ
ಬೆಂಗಳೂರು, ಆಗಸ್ಟ್ 16: ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಅಂಚೆ ಇಲಾಖೆ ಬಂಪರ್ ಆಫರ್ ನೀಡಿದೆ. ಇಲಾಖೆಯು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗವಕಾಶದ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಆಸಕ್ತರು ಸೆಪ್ಟಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು.
ಅಂಚೆ ಇಲಾಖೆಯಲ್ಲಿ ಒಟ್ಟು 28 ಸ್ಟಾಫ್ ಕಾರ್ ಡ್ರೈವರ್ (Staff Car Driver) ಹುದ್ದೆಗಳು ಖಾಲಿ ಇವೆ. ಆಸಕ್ತರು ಆಫ್‌ಲೈನ್/ ಅಂಚೆ ಮೂಲಕ ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಇದಕ್ಕು ಮುನ್ನ ಎಲ್ಲೆಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ, ವೇತನ, ಶೈಕ್ಷಣಿಕ ಮಾಹಿತಿ, ಅರ್ಜಿ ಶುಲ್ಕ ಸೇರಿದಂತೆ ನೇಮಕಾತಿ ಕುರಿತು ತಿಳಿಯಿರಿ.

ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ- ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು- ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆ- 28
ಅರ್ಜಿ ಸಲ್ಲಿಕೆಗೆ ಕೊನೆ ದಿನ- ಸೆಪ್ಟಂಬರ್ 15
ಖಾಲಿ ಹುದ್ದೆಗಳ ಜಿಲ್ಲಾವಾರು ವಿವರ
ಬೆಂಗಳೂರಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇವೆ. ಅದೇ ರೀತಿ ಮಂಡ್ಯ-1, ಮೈಸೂರು-3, ಚಿಕ್ಕೋಡಿ -1, ಕಲಬುರಗಿ- 1,
ಧಾರವಾಡ-1, ಗದಗ-1, ಕಾರವಾರ-1, ಉಡುಪಿ-1, ಕೋಲಾರ-1, ಪುತ್ತೂರು-1 ಹಾಗೂ ಶಿವಮೊಗ್ಗ-1 ಹುದ್ದೆಗಳು ಖಾಲಿ ಇವೆ.

ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ತಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯಸ್ಸಿನ ಮಿತಿ-ವೇತನ ಮಾಹಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇದೇ 2023ರ ಸೆಪ್ಟೆಂಬರ್ 15ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಇನ್ನೂ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 19,900 ರೂ.ನಿಂದ 63,200 ರೂವರೆಗೆ ವೇತನ ನೀಡಲಾಗುವುದು. ಆಯ್ಕೆಯಾಗುವವರಿಗೆ ಕರ್ನಾಟಕದಲ್ಲಿಯೇ ಪೋಸ್ಟಿಂಗ್ ನೀಡಲಾಗುವುದು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಹೇಳಿದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಕೆ ಬಳಿಕ ಅಭ್ಯರ್ಥಿಗಳ ಡ್ರೈವಿಂಗ್ ಲೈಸೆನ್ಸ್ ಪರಿಶೀಲನೆ, ಜೊತೆಗೆ ಚಾಲನಾ ಪರೀಕ್ಷೆ (ಡ್ರೈವಿಂಗ್ ಟೆಸ್ಟ್), ಟ್ರೇಡ್ ಟೆಸ್ಟ್ ನಡೆಸ ಬಳಿಕ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದೆ.
ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೂಕ್ತ ದಾಖಲೆಗಳ ಸಹಿ ಭರ್ತಿ ಮಾಡಿ ಅರ್ಜಿಯನ್ನು ವ್ಯವಸ್ಥಾಪಕರು, ಮೇಲ್ ಮೋಟಾರ್ ಸರ್ವೀಸ್, ಬೆಂಗಳೂರು- 560001 ಇಲ್ಲಿಗೆ ಕಳುಹಿಸಬೇಕು.












Click it and Unblock the Notifications