Post Office Jobs 2024: 10ನೇ ತರಗತಿ ಪಾಸಾದವರಿಗೂ ಕೇಂದ್ರ ಸರ್ಕಾರಿ ಉದ್ಯೋಗ, ನೇಮಕಾತಿ ವಿಧಾನ, ವಿವರ
ಬೆಂಗಳೂರು, ಡಿಸೆಂಬರ್ 26: ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತರು ಜನವರಿ 20ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 7 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ನಿಗದಿತ ದಿನಾಂಕ ದೊಳಗೆ ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಹಾಕಬೇಕು. ನಿರುದ್ಯೋಗಿ ಯುವಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮೊದಲು ಶೈಕ್ಷಣಿಕ ಅರ್ಹತೆ, ವೇತನ, ಶಲ್ಕ ಸೇರಿದಂತೆ ಇನ್ನಿತರ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿ.

ನೇಮಕಾತಿ ಮಾಹಿತಿ
ಸಂಸ್ಥೆ ಹೆಸರು: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಸ್ಟಾಫ್ ಕಾರ್ ಡ್ರೈವರ್
ಖಾಲಿ ಹುದ್ದೆ: 07
ವೇತನ ಮಾಸಿಕ: ₹19,900 ನಿಂದ 63,200 ರೂಪಾಯಿ
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಜನವರಿ 20
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯಸ್ಸಿನ ಮಿತಿ: ಸಡಿಲಿಕೆ ವಿವರ
ಭಾರತೀಯ ಅಂಚೆ ಇಲಾಖೆ ತಿಳಿಸಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಕೆಯ ಕೊನೆ ದಿನವಾದ ಜನವರಿ 20ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಇನ್ನೂ ಜಾತಿ ಮೀಸಲಾತಿ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪೈಕಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಸಿಗಲಿದೆ.

ಆಯ್ಕೆ ಹೇಗೆ ನಡೆಯುತ್ತದೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಡ್ರೈವಿಂಗ್ ಲೈಸೆನ್ಸ್ ಮತ್ತು ಥಿಯರಿ ಪರೀಕ್ಷೆ ಮಾಡಲಾಗುವುದು. ನಂತರ ಪ್ರಾಕ್ಟಿಕಲ್ ಟೆಸ್ಟ್/ ಕಾರ್ ಡ್ರೈವಿಂಗ್ ಟೆಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪೋಸ್ಟಿಂಗ್-ಮಾಸಿಕ ವೇತನ
ಆಯ್ಕೆ ಪ್ರಕ್ರಿಯೆಲ್ಲಿ ಆಯ್ಕೆಯಾಗುವ ಛತ್ತೀಸ್‌ಗಢದ ಬಿಲಾಸ್ಪುರ್, ರಾಯಗಢ, ರಾಯಪುರ, ಸರ್ಗುಜಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅವರಿಗೆ ಮಾಸಿಕವಾಗಿ 19,900 ನಿಂದ 63,200 ರೂಪಾಯಿ ವೇತನ ನೀಡಲಾಗುವುದು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ ವಿವರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಇಲ್ಲ. ಇನ್ನುಳಿದಂತೆ ಎಲ್ಲ ಇತರೆ ವಿಭಾಗ ಅಭ್ಯರ್ಥಿಗಳಿಗೆ 100 ರೂಪಾಯಿ ನೀಡಲಾಗುತ್ತದೆ. ಈ ಶುಲ್ಕದ ಹಣವನ್ನು ಇ-ಚಲನ್ ಮೂಲಕ ಪಾವತಿಸಬೇಕು ಎಂದು ಅಂಚೆ ಇಲಾಖೆ ಸೂಚಿಸಿದೆ.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳ ಸಮೇತವಾಗಿ, ''ಅಸಿಸ್ಟೆಂಟ್ ಡೈರೆಕ್ಟರ್ (Staff)
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್, ಛತ್ತೀಸ್ಗಢ ವೃತ್ತ, ರಾಯಪುರ-492001'' ಇಲ್ಲಿಗೆ ಕಳುಹಿಸಬೇಕಿದೆ.
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ ಆರಂಭವಾಗಿದ್ದು- 2023 ಡಿಸೆಂಬರ್ 20
ಅರ್ಜಿ ಸಲ್ಲಿಕೆ ಕೊನೆ ದಿನಾಂಕ- 2024 ಜನವರಿ 20
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications