ಅಂಚೆ ಇಲಾಖೆ ನೇಮಕಾತಿ: ಬಳ್ಳಾರಿಯಲ್ಲಿ ಆಗಸ್ಟ್‌ 5ರಂದು ನೇರ ಸಂದರ್ಶನ

ಬಳ್ಳಾರಿ, ಜುಲೈ 25: ಅಂಚೆ ಇಲಾಖೆ ನೇಮಕಾತಿಗಾಗಿ ಆಗಸ್ಟ್ 5ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಹ ಅಭ್ಯರ್ಥಿಗಳ ನೇಮಕಾತಿಗಾಗಿ ಆಗಸ್ಟ್‌ 5ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ. ನೇರ ಸಂದರ್ಶನವು ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ.

Postal Department Recruitment Walk In Interview On August 5 At Ballari

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅರ್ಜಿದಾರರ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಇರುವುದಿಲ್ಲ.

ವಿಮಾ ಉತ್ಪನ್ನ ಮಾರಾಟ ಮಾಡುವ ಅನುಭವದೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು 5000ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. 5,000ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 12ನೇ ತರಗತಿ ಉತ್ತೀರ್ಣರಾಗಿರಬೇಕು. ಇತರೆ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ನೇರ ಪ್ರತಿನಿಧಿ ಹುದ್ದೆ: ನೇರ ಪ್ರತಿನಿಧಿ ಹುದ್ದೆಗೆ ನಿರುದ್ಯೋಗಿ, ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು ಸರ್ಹರಾಗಿರುತ್ತಾರೆ. ಸಂದರ್ಶನ ಮೂಲಕ ಆಯ್ಕೆಯಾದ ಅಭ್ಯರ್ಥಿಯು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ 5 ಸಾವಿರ ರೂ.ಗಳನ್ನು ಭದ್ರತಾ ಠೇವಣಿ ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿ, ಫೀಲ್ಡ್ ಆಫೀಸರ್‌ಗಳಿಗೆ ತಮ್ಮ ವ್ಯವಹಾರ ತಕ್ಕಂತೆ ಸೂಕ್ತ ಕಮಿಷನ್ ಇದ್ದು, ನಿಗದಿತ ವೇತನವಿರುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ಅಧಿಕಾರಿ ಮಾರುತಿ. ವಿ. ಯು ಅವರ ಮೊಬೈಲ್ 9481694420 ಅಥವಾ ಅಂಚೆ ಅಧೀಕ್ಷಕರ ಕಾರ್ಯಾಲಯದ ದೂರವಾಣೀ 08392-266768ಗೆ ಸಂಪರ್ಕಿಸಬಹುದು.

ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ: ಬಳ್ಳಾರಿ ಪಶ್ಚಿಮ ವಲಯದ ಕುರುಗೋಡಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು 1 ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ ಎಸ್‌ಆರ್‌ಪಿ ಕೇಂದ್ರದ ವೈದ್ಯರ ಸಹಾಯಕ್ಕಾಗಿ ಒಬ್ಬ ಮಹಿಳಾ ಸಹಾಯಕಿಯರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

2024ರ ಆಗಸ್ಟ್ ತಿಂಗಳಿಂದ 2025ರ 8 ತಿಂಗಳಿಗೆ ಮಾತ್ರ ಕಾರ್ಯನಿರ್ವಹಿಸಲು ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿದೆ.
ವೈದ್ಯರ ಹುದ್ದೆಗೆ ಬ್ಯಾಚುಲರ್ ಆಫ್ ಫಿಜಿಯೋಥೆರಪಿ ಅಥವಾ ಡಿಪ್ಲೋಮಾ ಆಫ್ ಫಿಜಿಯೋಥೆರಪಿ ಆಗಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಬಳ್ಳಾರಿ ಪಶ್ಚಿಮ ವಲಯ, ಕುರುಗೋಡು ಇಲ್ಲಿಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08392-266239 ಸಂಖ್ಯೆಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+