ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ, ಖಾಲಿ ಹುದ್ದೆಗಳ ವಿವರ
ಬೆಂಗಳೂರು, ಡಿಸೆಂಬರ್ 08; ಸರ್ಕಾರಿ ಪ್ರೌಢಶಾಲೆಯಲ್ಲಿನ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಕುರಿತು ವಿಧಾನ ಪರಿಷತ್‌ನಲ್ಲಿ ಸಚಿವರು ಉತ್ತರ ನೀಡಿದ್ದಾರೆ. ಖಾಲಿ ಇರುವ ಹುದ್ದೆಗಳು ಎಷ್ಟು ಎಂದು ಸಚಿವರು ಉತ್ತರದಲ್ಲಿ ತಾಲೂಕುವಾರು ಮಾಹಿತಿಯನ್ನು ನೀಡಿದ್ದಾರೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್‌ನಲ್ಲಿ ಎಸ್. ಎಲ್. ಭೋಜೇಗೌಡ (ಶಿಕ್ಷಕರ ಕ್ಷೇತ್ರ) ಕೇಳಿದ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಉತ್ತರವನ್ನು ಕೊಟ್ಟಿದ್ದಾರೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗಳ ಸಂಖ್ಯೆ ಎಷ್ಟು (ತಾಲ್ಲೂಕುವಾರು ಮಾಹಿತಿ ನೀಡುವುದು). ರಾಜ್ಯದಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಬಂದಿದ್ದಲ್ಲಿ ಈ ಹುದ್ದೆಗಳನ್ನು ಸರ್ಕಾರ ಯಾವ ದಿನಾಂಕದಂದು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಲು ಕ್ರಮಕೈಗೊಳ್ಳುವುದು? ಎಂದು ಪ್ರಶ್ನಿಸಲಾಗಿತ್ತು.
ಸಚಿವರ ಉತ್ತರ; ಸಚಿವರು ತಮ್ಮ ಉತ್ತರದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಸಂಖ್ಯೆ 10155. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳ ಸಂಖ್ಯೆ 3902 ಎಂದು ಮಾಹಿತಿ ನೀಡಿದ್ದಾರೆ.
ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಖಾಲಿ ಹುದ್ದೆಗಳಲ್ಲಿ ಬೋಧಕರ ವೃಂದದ ಖಾಲಿ ಹುದ್ದೆಗಳಿಗೆ ಎದುರಾಗಿ ಒಟ್ಟು 7808 ಅತಿಥಿ ಶಿಕ್ಷಕರನ್ನು ತಾತ್ಕಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದ ದಿನಾಂಕ 13/09/2022ರ ಪತ್ರದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೂಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ ಎಂದು ಸಚಿವರು ಹೇಳಿದ್ದಾರೆ.
ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ವಿವರಣೆ ನೀಡಿದ್ದಾರೆ.
ಪದವಿ ಪೂರ್ವ ಕಾಲೇಜು; ಖಾಲಿ ಇರುವ ನೇರ ನೇಮಕಾತಿ ಕೋಟಾದ 3483 ಹುದ್ದೆಗಳ ಪೈಕಿ ಸರ್ಕಾರದ ಪತ್ರ ದಿನಾಂಕ 18/08/2022ರಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ 10 ವಿಷಯಗಳ 778 ಉಪನ್ಯಾಸಕರ ಹುದ್ದೆಗಳನ್ನು ಹಾಗೂ ಸರ್ಕಾರದ ಪತ್ರ ದಿನಾಂಕ 02/08/2022ರಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಲ್ಯಾಣ- ಕರ್ನಾಟಕ ಭಾಗದಲ್ಲಿ 371-ಜೆ ಗೆ ಮೀಸಲಿರಿಸಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ 07 ವಿಷಯಗಳ 36 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿಯನ್ನು ನೀಡಲಾಗಿದೆ.
ಅನುಮತಿ ನೀಡಲಾದ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮೀಸಲಾತಿ ಬಿಂದುಗಳನ್ನು ಅಳವಡಿಸುವ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಭಿಪ್ರಾಯ ಕೋರಲಾಗಿದೆ. ಖಾಲಿಯಿರುವ ಮುಂಬಡ್ತಿ ಕೋಟಾದ 419 ಹುದ್ದೆಗಳಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಂದ ರಾಜ್ಯಮಟ್ಟದ ಕ್ರೋಢಿಕೃತ ಜೇಷ್ಠತಾ ಪಟ್ಟಿಯನ್ನು ಪಡೆದು ಬಡ್ತಿ ಪ್ರಕ್ರಿಯೆ ಕೈಗೊಳ್ಳಲಾಗುವುದು.
ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ 2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಿಸಿಕೊಳ್ಳಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಸಚಿವರು ಉತ್ತರದಲ್ಲಿ ವಿವರಣೆ ನೀಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications