ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಪದೋನ್ನತಿ: ಸಿಹಿಸುದ್ದಿ ನೀಡಿದ ಸರ್ಕಾರ

ಬೆಂಗಳೂರು, ಡಿಸೆಂಬರ್ 10: ಸರ್ಕಾರಿ ಪ್ರೌಢಶಾಲೆಗಳಲ್ಲಿ ಸಹ ಶಿಕ್ಷಕರಾಗಿ ಕೆಲಸ ಮಾಡುತ್ತಿರುವವರು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕ ಹುದ್ದೆಗೆ ಪದೋನ್ನತಿ ಪಡೆಯಲು ಇರುವ ನಿಯಮಗಳೇನು?. ಯಾವಾಗ ಪದೋನ್ನತಿ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕರ್ನಾಟಕ ವಿಧಾನ ಪರಿಷತ್ ಚಳಿಗಾಲದ ಅಧಿವೇಶನದಲ್ಲಿ ಲಿಖಿತ ಉತ್ತರವನ್ನು ನೀಡಿದ್ದಾರೆ.

ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್‌ನಲ್ಲಿ ಸದಸ್ಯ ಎಸ್. ವಿ. ಸುಂಕನೂರ ಕೇಳಿದ್ದ ಪ್ರಶ್ನೆಗೆ ಸಚಿವರು ಉತ್ತರವನ್ನು ಕೊಟ್ಟಿದ್ದಾರೆ. ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿಪೂರ್ವ ವಿಭಾಗದ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಲು ನಿಯಮದ ಪ್ರಕಾರ ಅವಕಾಶ ಇದೆಯೇ?. ಹಾಗಿದ್ದಲ್ಲಿ ಯಾವ ವರ್ಷದವರೆಗೆ ಈ ರೀತಿಯ ಪದೋನ್ನತಿ ನೀಡಲಾಗಿದೆ, ಮಾಹಿತಿ ನೀಡುವುದು ಎಂದು ಪ್ರಶ್ನಿಸಲಾಗಿತ್ತು.

Promotion Opportunities For Government High School Assistant Teachers

ಸಚಿವರು ತಮ್ಮ ಉತ್ತರದಲ್ಲಿ ಸರ್ಕಾರದ ಅಧಿಸೂಚನೆ 15/5/2014ರಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ನೇರ ನೇಮಕಾತಿಗೆ ಶೇ 75ರಷ್ಟು ಹುದ್ದೆಗಳನ್ನು ಮತ್ತು ಶೇ 25ರಷ್ಟು ಹುದ್ದೆಗಳನ್ನು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ಮೂಲಕ ತುಂಬಲು ಅವಕಾಶ ಕಲ್ಪಿಸಲಾಗಿರುತ್ತದೆ. 2013ರನೇ ಸಾಲಿನವರೆಗೆ ಪದೋನ್ನತಿ ನೀಡಲಾಗಿರುತ್ತದೆ ಎಂದು ಹೇಳಿದ್ದಾರೆ.

ಹಲವಾರು ವರ್ಷಗಳಿಂದ ಸಹ ಶಿಕ್ಷಕರ ಹುದ್ದೆಯಿಂದ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡದಿರುವ ಇಲಾಖೆಯ ಮೇಲೆ ಅಪಾದನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಹಾಗಿದ್ದಲ್ಲಿ ವಿಳಂಬಕ್ಕೆ ಕಾರಣವೇನು? ಎಂದು ಪ್ರಶ್ನಿಸಲಾಗಿತ್ತು.

ಹೌದು, ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡುವ ಸಂಬಂಧ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ) ಇವರ ಪತ್ರ ದಿನಾಂಕ 02-02-2024 ಮತ್ತು 07-03-2024ರಲ್ಲಿ ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ 23-04-2024ರ ಪತ್ರಗಳಲ್ಲಿ ರಾಜ್ಯ ಮಟ್ಟದ ಒಂದೇ ಉಪನ್ಯಾಸಕರ ಹುದ್ದೆಗೆ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಪದೋನ್ನತಿ ನೀಡಬೇಕೆಂಬ ಪ್ರೌಢ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.

ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ದಿನಾಂಕ 16-10-2024ರಂದು ನೀಡಿರುವ ಅಭಿಪ್ರಾಯದನ್ವಯ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ, ಅಂತಿಮ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತೆ) ನಿಯಮಗಳು 19570 ನಿಯಮ 7-ಎ ರ ನಿಯಮದನ್ವಯ ಪರಿಶೀಲಿಸಿ ಅಗತ್ಯಕ್ರಮವಹಿಸಲು ಸರ್ಕಾರದ ದಿನಾಂಕ 23- 10-2024ರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ/ ಕಲಬುರಗಿ ಮತ್ತು ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು ಇವರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಬೇಡಿಕೆ ಈಡೇರಿಕೆ ಯಾವಾಗ?; ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬ ಪ್ರೌಢಶಾಲಾ ಸಹ ಶಿಕ್ಷಕರ ಬೇಡಿಕೆಯನ್ನು ಯಾವಾಗ ಈಡೇರಿಸಲಾಗುವುದು? ಮಾಹಿತಿ ಒದಗಿಸುವುದು ಎಂದು ಪ್ರಶ್ನಿಸಲಾಗಿತ್ತು.

ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲು ವಿಭಾಗೀಯ ಕಛೇರಿಗಳಿಂದ ಪಟ್ಟಿಯನ್ನು ಪಡೆದು, ಶಾಲಾ ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕಾ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸದರಿ ತಾತ್ಕಾಲಿಕಾ ಜೇಷ್ಠತಾ ಪಟ್ಟಿಗೆ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ ನಂತರ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯ ಬಗ್ಗೆ ತ್ವರಿತವಾಗಿ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+