• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

|
Google Oneindia Kannada News

ಬೆಂಗಳೂರು, ನವೆಂಬರ್‌, 18: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2ರಂತೆ ದಾಖಲಾತಿಯ ಪರಿಶೀಲನೆಯನ್ನು ಕೂಡ ನಡೆಸಲಾಗಿತ್ತು. ಇದೀಗ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಯೊಂದಿಯನ್ನು ಗಮನದಲ್ಲಿಟ್ಟು ಕೆಲಸ ಮಾಡುತ್ತಿದೆ. ಅಲ್ಲದೇ ವಿದ್ಯಾರ್ಥಿಗಳು, ಶಿಕ್ಷಕರ ಸ್ನೇಹಿಯಾಗಿ ಭವಿಷ್ಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಿದ ಸರ್ಕಾರಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಿದ ಸರ್ಕಾರ

15,000 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವೆಂವರ್‌ 14ರಂದು 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಶುಕ್ರವಾರ (ನವೆಂವರ್‌ 18) 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 15,000 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇಕಡಾ 1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟುನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿತ್ತು. ಅದರಂತೆಯೇ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಇಲ್ಲಿವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸಚಿವ ಬಿ.ಸಿ ನಾಗೇಶ್ ಅವರು ಈಗಾಗಲೇ ನಿನ್ನೆ ಟ್ವಿಟ್ ಮಾಡಿ, ಶುಕ್ರವಾರ (ನವೆಂಬರ್‌ 18) ಸಂಜೆ 6 ಗಂಟೆಗೆ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುವುದಾಗಿ ಹೇಳಿದ್ದರು. ಇದಕ್ಕೂ ಮುನ್ನಾ ಈ ವಾರ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿಯೂ ಘೋಷಿಸಿದ್ದರು. ಅದರಂತೆಯೇ ಶುಕ್ರವಾರ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಆಯ್ಕೆ ಪಟ್ಟಿಯನ್ನು ನೋಡಲು www.schooleducation.kar.nic.in ಜಾಲತಾಣಕ್ಕೆ ಭೇಟಿ ನೀಡಿ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

English summary
Provisional selection list release by Karnataka Education Department for recruitmen of 15 thousand graduate primary school teachers, Informatio from education ministaer BC Nagesh, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X