ಪಿಯುಸಿ ಉಪನ್ಯಾಸಕರ ನೇಮಕಾತಿ; ಕೌನ್ಸಿಲಿಂಗ್ ದಿನಾಂಕ ಘೋಷಣೆ
ಬೆಂಗಳೂರು, ಜೂನ್ 24 : ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿನ ವಿವಿಧ ವಿಷಯಗಳ ಉಪನ್ಯಾಸಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈಗ ನೇಮಕಾತಿಯ ಕೌನ್ಸಿಲಿಂಗ್ ದಿನಾಂಕವನ್ನು ಪ್ರಕಟಿಸಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬುಧವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ನೇಮಕಾತಿಯನ್ನು ನಿರೀಕ್ಷಿಸುತ್ತಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಲು ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ.
ಜುಲೈ 8ರಂದು ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲು ಈ ಮೂಲಕ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾಮಾಜಿಕ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕಾಗಿದೆ.

ಉದ್ದೇಶಿತ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆದಷ್ಟು ಆನ್‌ಲೈನ್ ಮೂಲಕವೇ ನಿರ್ವಹಿಸಿ, ನೇಮಕಾತಿ ಆದೇಶಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸುರೇಶ್ ಕುಮಾರ್ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಸುರೇಶ್ ಕುಮಾರ್ ಈ ಕುರಿತು ಫೇಸ್ ಬುಕ್‌ನಲ್ಲಿಯೂ ಮಾಹಿತಿ ನೀಡಿದ್ದಾರೆ. ಅಧಿಕೃತ ಆದೇಶವನ್ನು ಹಾಕಿದ್ದಾರೆ.












Click it and Unblock the Notifications