ರಾಯಚೂರು : 41 ಗ್ರಾಮಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 25 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ರಾಯಚೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 22/2/2019 ಕೊನೆಯ ದಿನವಾಗಿದೆ.
ಒಟ್ಟು 41 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೈದರಾಬಾದ್-ಕರ್ನಾಟಕ ಪ್ರದೇಶದವರಿಗೆ ಮೀಸಲಿರಿಸಿದ ಹುದ್ದೆಗಳ ಪೈಕಿ ಖಾಲಿ ಇರುವ ಹುದ್ದೆಗಳು 41, ಇತರೆ ಪ್ರದೇಶದವರಿಗೆ ಮೀಸಲಿರಿಸಿದ ಹುದ್ದೆಗಳು 10.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1ರ ಅಭ್ಯರ್ಥಿಗಳಿಗೆ 150 ರೂ., ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಕ್ಕೆ 300 ರೂ.ಗಳ ಶುಲ್ಕ ನಿಗದಿ ಮಾಡಲಾಗಿದೆ.
ವಿದ್ಯಾರ್ಹತೆ : ಪಿಯುಸಿ ಪರೀಕ್ಷೆ ಅಥವ ಸಿಬಿಎಸ್‌ಇ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ 22/2/2019ಕ್ಕೆ ಕೆಳಗಿನ ಗರಿಷ್ಠ ವಯೋಮಿತಿಯನ್ನು ಹೊಂದಿರತಕ್ಕದ್ದು.
ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದವರಿಗೆ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ ವಿಳಾಸ












Click it and Unblock the Notifications