50 ಹುದ್ದೆ ಭರ್ತಿಗೆ ಅರ್ಜಿ ಕರೆದ ರಾಯಚೂರು ಜಿಲ್ಲಾ ಪಂಚಾಯಿತಿ

ಬೆಂಗಳೂರು, ಸೆಪ್ಟೆಂಬರ್ 10 : ರಾಯಚೂರು ಜಿಲ್ಲಾ ಪಂಚಾಯಿತಿ 50 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನ ಸಲ್ಲಿಸಲು 27/9/2019 ಕೊನೆಯ ದಿನವಾಗಿದೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ - 2 40 ಹುದ್ದೆಗಳು, ದ್ವೀತಿಯ ದರ್ಜೆ ಸಹಾಯಕ 10 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ವಿದ್ಯಾರ್ಹತೆ ನ್ಯಾಯಾಲಯದಲ್ಲಿ ದಾಖಲಿಸಲಾದ ರಿಟ್ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ.

Raichur Zilla Panchayat Recruitment Apply For 50 Post

ದ್ವೀತಿಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ರಾಜ್ಯ ಪಿಯುಸಿ ಮಂಡಳಿ ನಡೆಸುವ ಪಿಯುಸಿ ಅಥವ ತತ್ಸಮಾನ ಎಂದು ಪರಿಗಣಿಸಿ ಘೋಷಣೆ ಮಾಡಿರುವ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಜಿಲ್ಲಾ ಪಂಚಾಯಿತಿ ನೇಮಕಾತಿ ನಿಯಮದ ಪ್ರಕಾರ ಅರ್ಜಿ ಸಲ್ಲಿಸುವವರಿಗೆ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಆಸಕ್ತರು ಅರ್ಜಿ ನಮೂನೆಯನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ರಾಯಚೂರು ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಬೇಕಾಗಿದೆ. 27/9/2019ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+