ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

50 ಹುದ್ದೆ ಭರ್ತಿಗೆ ಅರ್ಜಿ ಕರೆದ ರಾಯಚೂರು ಜಿಲ್ಲಾ ಪಂಚಾಯಿತಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10 : ರಾಯಚೂರು ಜಿಲ್ಲಾ ಪಂಚಾಯಿತಿ 50 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನ ಸಲ್ಲಿಸಲು 27/9/2019 ಕೊನೆಯ ದಿನವಾಗಿದೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ - 2 40 ಹುದ್ದೆಗಳು, ದ್ವೀತಿಯ ದರ್ಜೆ ಸಹಾಯಕ 10 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್‌ಬಿಐ ನೇಮಕಾತಿ : 477 ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿಎಸ್‌ಬಿಐ ನೇಮಕಾತಿ : 477 ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿ

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ವಿದ್ಯಾರ್ಹತೆ ನ್ಯಾಯಾಲಯದಲ್ಲಿ ದಾಖಲಿಸಲಾದ ರಿಟ್ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ.

Raichur Zilla Panchayat Recruitment Apply For 50 Post

ದ್ವೀತಿಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ರಾಜ್ಯ ಪಿಯುಸಿ ಮಂಡಳಿ ನಡೆಸುವ ಪಿಯುಸಿ ಅಥವ ತತ್ಸಮಾನ ಎಂದು ಪರಿಗಣಿಸಿ ಘೋಷಣೆ ಮಾಡಿರುವ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಬಿಬಿಎಂಪಿ ನೇಮಕಾತಿ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನಬಿಬಿಎಂಪಿ ನೇಮಕಾತಿ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ನೇಮಕಾತಿ ನಿಯಮದ ಪ್ರಕಾರ ಅರ್ಜಿ ಸಲ್ಲಿಸುವವರಿಗೆ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

145 ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಕರೆದ ಎನ್‌ಎಫ್‌ಎಲ್145 ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಕರೆದ ಎನ್‌ಎಫ್‌ಎಲ್

ಆಸಕ್ತರು ಅರ್ಜಿ ನಮೂನೆಯನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ರಾಯಚೂರು ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಬೇಕಾಗಿದೆ. 27/9/2019ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Raichur Zilla panchayat invited applications for 50 post. Candidates looking for Grade-2 Secretaries & Second Division Accounts Assistants can apply before 27/9/2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X