8 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ರೈಲ್ ಟೆಲ್

ಬೆಂಗಳೂರು, ಜುಲೈ 10 : ರೈಲ್ ಟೆಲ್ 8 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 14, 2018 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ 8 ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್/ಬಿಎಸ್‌ಸಿ (ಇಂಜಿಯರಿಂಗ್) ಇನ್ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಾಂ ಅಥವ ಎಲೆಕ್ಟ್ರಾನಿಕ್ಸ್ ಮುಖ್ಯ ವಿಷಯವಾಗಿರುವ ಯಾವುದೇ ಇಂಜಿನಿಯರಿಂಗ್ ವಿಷಯದಲ್ಲಿ ಉತ್ತೀರ್ಣಹೊಂದಿರಬೇಕು. ಜಿಎಟಿಇ 2018 ಇನ್ ಎಲೆಕ್ಟ್ರಾನಿಕ್ಸ್ ಪೇಪರ್.

RailTel recruitment 2018 : Apply for 08 Deputy Manager Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 21 ರಿಂದ 31, ಎಸ್‌ಸಿ ಅಭ್ಯರ್ಥಿಗಳಿಗೆ 21 ರಿಂದ 33 ವರ್ಷದ ವಯೋಮಿತಿ ಜುಲೈ 14, 2018ಕ್ಕೆ ಅನ್ವಯವಾಗುವಂತೆ.

ವೇತನ ಶ್ರೇಣಿ : 40000 ದಿಂದ 140000 ಪ್ರತಿ ತಿಂಗಳು.

ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ., ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+