Indian Railways Requirement: ಕನ್ನಡಿಗರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರ್ಜರಿ ಗುಡ್ ನ್ಯೂಸ್
Indian Railways: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಆಗಾಗ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇರುತ್ತದೆ. ಬೇಡಿಕೆ ಮೇರೆಗೆ ರೈಲ್ವೆ ಜಾಲವನ್ನು ವಿಸ್ತರಣೆ ಮಾಡುತ್ತಲಿದೆ. ಜೊತೆಗೆ ಇದೀಗ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರೈಲ್ವೆ ಪರೀಕ್ಷೆಗಳನ್ನು ಬರೀ ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ನಡೆಸಲಾಗುತ್ತದೆ. ಕನ್ನಡದಲ್ಲಿ ನಡೆಸುವುದಿಲ್ಲ ಎನ್ನುವ ಕೊರಗಿತ್ತು. ಆದರೆ, ಇದೀಗ ಇದಕ್ಕೆ ಉತ್ತರವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನೀಡಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವ ಪ್ರಶ್ನೆ ಬಹುತೇಕ ಮಂದಿಯಲ್ಲಿ ಮೂಡಿರುತ್ತದೆ. ಇದಕ್ಕೆಲ್ಲ ಉತ್ತರ ಇಲ್ಲಿದೆ ಕಣ್ಣಾಡಿಸಿ.

ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷಗಳನ್ನು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದರು. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಶ್ನೆಗೆ ಉತ್ತರಿಸಿದರು.
ಅರ್ಜಿ ಸಲ್ಲಿಸುವ ಎಲ್ಲಾರನ್ನೂ ಸಮಾನವಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಯಾವುದೇ ರಾಜ್ಯ ಅಥವಾ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಸಮಯದಲ್ಲಿ 15 ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮ ಆಯ್ಕೆ ಮಾಡಿಕೊಳ್ಳಬೇಕು. ಪ್ರಶ್ನೆಗಳನ್ನು ಅಭ್ಯರ್ಥಿ ಆಯ್ಕೆ ಮಾಡಿದ ಭಾಷೆಯಲ್ಲಿ ಮತ್ತು ಇಂಗ್ಲಿಷ್‌ನಲ್ಲಿ ನೀಡಲಾಗುತ್ತದೆ ಎಂದು ಹೇಳಿದರು.
ವಿ.ಸೋಮಣ್ಣ ಹೇಳಿದ್ದೇನು?: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದಿಂದ ತುಂಬಾ ಪ್ರಯೋಜನಾಗಳಿವೆ. ಪ್ರಯಾಣ ಅವಧಿ ಕಡಿಮೆಯಾಗಲಿದ್ದು, ಇದರಿಂದ ಪ್ರಯಾಣಿಕರಿಗೆ ಸಮಯ ಉಳಿದಂತಾಗಲಿದೆ. ಆದ್ದರಿಂದ ಈ ರೈಲು ಮಾರ್ಗ ಯಾವಾಗ ಪೂರ್ಣಗೊಂಡು ಪ್ರಯಾಣಕ್ಕೆ ಮುಕ್ತವಾಗಲಿದೆಯೋ ಎಂದು ಪ್ರಯಾಣಿಕರು ಕಾತರದಲ್ಲಿದ್ದಾರೆ. ಈ ಸಂಬಂಧ ಇದೀಗ ಸಚಿವ ವಿ.ಸೋಮಣ್ಣ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.
ತುಮಕೂರು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುವುದಲ್ಲದೆ, ಕೆಲವೇ ವರ್ಷಗಳಲ್ಲಿ ಬೆಂಗಳೂರಿನ ಸಮೀಪದವರೆಗೂ ವಿಸ್ತರಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶ, ರೈಲು ಪ್ರಮಾಣ ಅವಲಂಬನೆ ಹೆಚ್ಚಳ ಆಗುವ ದೃಷ್ಟಿಯಿಂದ ತುಮಕೂರು-ಬೆಂಗಳೂರು ನಡುವೆ 4 ರೈಲು ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ಹೆಚ್ಚುವರಿ ರೈಲುಗಳ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.
ತುಮಕೂರಿನ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆ ಇಟ್ಟುಕೊಂಡಿದ್ದ 11ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟನೆ ಮಾಡಿ, ಪ್ರಯಾಣಿಕರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಣೆ ಮಾಡಿದರು. ಈ ವೇಳೆ ರೈಲು ಕಾಮಗಾರಿಗಳ ಬಗ್ಗೆ ಮಾತನಾಡಿದರು. ಅದರಲ್ಲೂ ಬಹುನಿರೀಕ್ಷಿತ ರೈಲು ಮಾರ್ಗದ ಯೋಜನೆ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡರು.
ಇನ್ನು 18 ವರ್ಷಗಳಿಂದ ಬಾಕಿ ಉಳಿದಿದ್ದ ಬಹುನಿರೀಕ್ಷಿತ ತುಮಕೂರು-ದಾವಣಗೆರೆ ರೈಲು ಮಾರ್ಗ ಯೋಜನೆ ಕಾಮಗಾರಿಗೆ ಇದೀಗ ವೇಗ ಸಿಕ್ಕಿದೆ. ಸುಮಾರು 2,500 ಹೆಕ್ಟೇರ್ ಭೂಮಿ ಸ್ವಾಧೀನ ಪ್ರಕ್ರಿಯೆ ಮುಗಿಯುತ್ತಾ ಬಂದಿದೆ ಎಂದು ಹೇಳಿದರು. ಇನ್ನು ಇದೇ ವೇಳೆ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಕರಣಂರಮೇಶ್ ಮಾತನಾಡಿ, ತುಮಕೂರು-ಬೆಂಗಳೂರು ಮಾರ್ಗದಲ್ಲಿ ಹೆಚ್ಚಿನ ರೈಲು ಸೇವೆ ನೀಡಬೇಕು ಎಂದು ಮನವಿ ಮಾಡಿದರು.
ಅಲ್ಲದೆ, ತುಮಕೂರಿನಿಂದ ಹೊರಡುವ ಮೆಮೊ ರೈಲು ಬೆಂಗಳೂರಿನ ಯಶವಂತಪುರದವರೆಗೆ ಮಾತ್ರ ಸೇವೆ ನೀಡುತ್ತಿದೆ. ಇದರ ಸೇವೆಯನ್ನು ಸಂಗೊಳ್ಳಿರಾಯಣ್ಣ ನಿಲ್ದಾಣದವರೆಗೂ ವಿಸ್ತರಣೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ತುಮಕೂರಿನಿಂದ-ಬೆಂಗಳೂರಿಗೆ, ಬೆಂಗಳೂರಿನಿಂದ-ತುಮಕೂರಿಗೆ ಪ್ತಯಾಣ ಮಾಡುವವರ ಸಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹೆಚ್ಚುವರಿ ರೈಲು ಸೇವೆ ಒದಗಿಸಬೇಕೆಂದು ಮನವಿ ಮಾಡಿದರು.












Click it and Unblock the Notifications