ಭಾರತೀಯ ರೈಲ್ವೆ ನೇಮಕಾತಿ : ಕೆಲವು ನಿಯಮ ಬದಲಾವಣೆ
ಬೆಂಗಳೂರು, ಫೆಬ್ರವರಿ 23 : ಭಾರತೀಯ ರೈಲ್ವೆ 89 ಸಾವಿರ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗಲಿ ಎಂದು ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ಭಾರತೀಯ ರೈಲ್ವೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ನೇಮಕಾತಿ ಮಾಡುತ್ತಿದೆ. ಹಿಂದೆ ಅಧಿಸೂಚನೆ ಹೊರಡಿಸಿದ್ದ ಸಂದರ್ಭದಲ್ಲಿ ಹೇರಿದ್ದ ನಿಯಮಾವಳಿಗಳನ್ನು ಸಡಿಲಗೊಳಿಸಲಾಗಿದೆ.
ಬದಲಾದ ನಿಯಮಾವಳಿಗಳು
* ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ವಯೋಮಿತಿಯನ್ನು 2 ವರ್ಷಗಳ ತನಕ ಹೆಚ್ಚಳ ಮಾಡಲಾಗಿದೆ. ಇದರಿಂದ ಹೆಚ್ಚಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗಲಿದೆ.

* ಮೀಸಲು ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ 500 ರೂ.ಗಳನ್ನು ಪಾವತಿ ಮಾಡಬೇಕು. ಅವರು ಪರೀಕ್ಷೆಗೆ ಹಾಜರಾದರೆ 400 ರೂ.ಗಳನ್ನು ವಾಪಸ್ ಮಾಡಲಾಗುತ್ತದೆ.
* ಲೆವೆಲ್ 1 ಹುದ್ದೆಗೆ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.
* ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆಯನ್ನು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ನೀಡಲಾಗುತ್ತದೆ.












Click it and Unblock the Notifications