Ramanagara Govt Jobs: ಜಿಲ್ಲಾ ಕೋರ್ಟ್‌ನಲ್ಲಿ ನೇಮಕಾತಿ, ಕೈತುಂಬ ವೇತನ, ಆಯ್ಕೆ, ವಿಧಾನದ ವಿವರ
ಬೆಂಗಳೂರು, ಡಿಸೆಂಬರ್ 31: ರಾಮನಗರ ಜಿಲ್ಲಾ ನ್ಯಾಯಾಲಯವು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳನ್ನು ಸದುಪಯೋಗ ಮಾಡಿಕೊಳ್ಳಬೇಕಿದೆ.
ರಾಮನಗರ ಜಿಲ್ಲಾ ನ್ಯಾಯಾಲಯವು ಒಟ್ಟು 6 ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಮುಂದಿನ ತಿಂಗಳು ಜನವರಿ 22ರೊಳಗೆ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ನಿರುದ್ಯೋಗಿ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಕೆ ಮೊದಲು ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ರಾಮನಗರ ಜಿಲ್ಲಾ ಕೋರ್ಟ್ ನೇಮಕಾತಿ
ಹುದ್ದೆ ಹೆಸರು: ಸ್ಟೆನೋಗ್ರಾಫರ್, ಟೈಪಿಸ್ಟ್
ಖಾಲಿ ಹುದ್ದೆ: 6
ಮಾಸಿಕ ವೇತನ: 27,650 ರಿಂದ 52,650 ರೂಪಾಯಿ
ಪೋಸ್ಟಿಂಗ್: ರಾಮನಗರ
ಅರ್ಜಿ ಸಲ್ಲಿಕೆ ಕೊನೆ: 2024 ಜನವರಿ 22
ಹುದ್ದೆಯ ಇತರೆ ಮಾಹಿತಿ ನೋಡುವುದಾದರೆ, ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್- 3, ಟೈಪಿಸ್ಟ್- 2 ಹಾಗೂ ಟೈಪಿಸ್ಟ್-ಕಾಪಿಯಿಸ್ಟ್ ಒಂದು ಹುದ್ದೆ ಖಾಲಿ ಇದೆ.
ವಿದ್ಯಾರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಎಂದು ರಾಮನಗರ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ತಿಳಿಸಿದೆ.
ಅಭ್ಯರ್ಥಿಗಳ ವಯೋಮಿತಿ
ಅಭ್ಯರ್ಥಿಗಳ ವಯಸ್ಸು 2024ರ ಜನವರಿ 22 ವೇಳೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು ತಿಳಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ-I ಅಭ್ಯರ್ಥಿಗಳು ಐದು ವರ್ಷ, ಪ್ರವರ್ಗ-2A/2B/3A & 3B ಅಭ್ಯರ್ಥಿಗಳು ಮೂರು ವರ್ಷಗಳ ವಸಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.

ಮಾಸಿಕ ವೇತನ-ಅರ್ಜಿ ಶುಲ್ಕ
ರಾಮನಗರದಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿನ ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆ ಆಗುವವರಿಗೆ ಮಾಸಿಕ ₹ 27,650 ರಿಂದ 52,650 ರೂಪಾಯಿ, ಟೈಪಿಸ್ಟ್ ಹುದ್ದೆ ಮಾಸಿಕ ₹ 21,400 ರಿಂದ 42,000 ರೂಪಾಯಿ ಹಾಗೂ ಟೈಪಿಸ್ಟ್-ಕಾಪಿಯಿಸ್ಟ್ ಅಭ್ಯರ್ಥಿಗಳಿಗೆ ಮಾಸಿಕ ₹ 21,400 ರಿಂದ 42,000 ರೂಪಾಯಿ ವೇತನ ಇರಲಿದೆ.
ಅರ್ಜಿ ಶುಲ್ಕದ ಮಾಹಿತಿ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-I/PH ಅಭ್ಯರ್ಥಿಗಳಿಗೆ ಶುಲ್ಕ ನಿಗದಿ ಆಗಿಲ್ಲ. ಪ್ರವರ್ಗ-2A/2B/3A & 3B ಅಭ್ಯರ್ಥಿಗಳು 100 ರೂಪಾಯಿ ಶುಲ್ಕ, ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂಪಾಯಿ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕವೇ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದಲ್ಲಿ ಆಯ್ಕೆ ಮಾಡುವ ಜೊತೆಗೆ ಟೈಪಿಂಗ್ ಪರೀಕ್ಷೆ ನಡೆಸಿ ಬಳಿಕ ಸಂದರ್ಶನ ನಡೆಸಲಿದ್ದಾರೆ. ಈ ಮೂಲಕ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ಸಲ್ಲಿಸಲು ಈ ಅಧಿಕೃತ https://recruitmenthck.kar.nic.in/district/rmn/stg/home.php ಮೇಲೆ ಕ್ಲಿಕ್ ಮಾಡಬೇಕು
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ- 2023 ಡಿಸೆಂಬರ್ 22
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಜನವರಿ 22
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನ: ಜನವರಿ 23
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕೊನೆ ಜನವರಿ 23ರವರೆಗೆ ಕಾಯದೇ ಈ ಕೂಡಲೇ ಅಗತ್ಯ ದಾಖಲೆಗಳ ಸಹಿತ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ನೋಡಿಕೊಳ್ಳಬೇಕು.











Click it and Unblock the Notifications