ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ; ರಾಣಿ ಚನ್ನಮ್ಮ ವಿವಿಯಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಮಡಿಕೇರಿ, ಅಕ್ಟೋಬರ್ 18; ಬೆಳಗಾವಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋದಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಸರ್ಕಾರದ ಆದೇಶದಂತೆ ಕಲ್ಯಾಣ-ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನೋಂದಾಯಿತ ಅಂಚೆ ಮೂಲಕ, ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಖಾಲಿ ಇರುವ ಪ್ರತಿ ಹುದ್ದೆಗೆ ಪ್ರತ್ಯೇಕವಾದ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರ

ಉಪ ಕುಲಸಚಿವರು 1, ಸಹಾಯಕ ಕುಲಸಚಿವರು 1, ಎಸ್ಟೇಟ್ ಆಫೀಸರ್ 1, ಕಚೇರಿ ಅಧೀಕ್ಷಕರು 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಠ 40 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.

ನಬಾರ್ಡ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ತಕ್ಷಣ ಅರ್ಜಿ ಹಾಕಿನಬಾರ್ಡ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ತಕ್ಷಣ ಅರ್ಜಿ ಹಾಕಿ

Rani Channamma University Non Teaching Staff Recruitment

ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾಜಿ ಸೈನಿಕನಾಗಿದ್ದಲ್ಲಿ ಅವನು ಸಶಸ್ತ್ರ ಕೇಂದ್ರದಳದಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು. ಅಂತಹ ಅಭ್ಯರ್ಥಿಗಳಿಗೆ ಸೇವಾವಧಿ ಆಧಾರದ ಮೇಲೆ ಅವರ ಸೇವಾವಧಿಯೊಂದಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಗೆ ಅವಕಾಶ ಇರುತ್ತದೆ (ಗರಿಷ್ಠ ವಯೋಮಿತಿ 45 ವರ್ಷ).

ರೈಲ್ವೆ ನೇಮಕಾತಿ: 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ರೈಲ್ವೆ ನೇಮಕಾತಿ: 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕಗಳು; ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 1000 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 500 ರೂ.. ಅಂಗವಿಕಲ, ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ಪೂರ್ಣ ವಿನಾಯಿತಿ ಇದೆ. (ಅಧಿಕೃತ ಪ್ರಮಾಣ ಪತ್ರದ ಪ್ರತಿಗಳನ್ನು ಪೂರೈಸಬೇಕು).

ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಹಣಕಾಸು ಅಧಿಕಾರಿಗಳು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ವಿದ್ಯಾಸಂಗಮ, ಬೆಳಗಾವಿ 591156 ಇವರ ಹೆಸರಿಗೆ ಪಾವತಿ ಮಾಡಿ, ಡಿಡಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿ ವಾಪಸ್ ನೀಡಲಾಗುವುದಿಲ್ಲ. ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿದೆ.

ಸೂಚನೆಗಳು; ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದ್ರಾಬಾದ್-ಕರ್ನಾಟಕ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರ ನೀಡಿದೆ) 2013ರ ಅನ್ವಯ ನೇಮಕಾತಿಯಲ್ಲಿ ಸ್ಥಳೀಯ ಅಭ್ಯರ್ಥಿಯೆಂದು ಮೀಸಲಾತಿಯನ್ನು ಕ್ಲೇಮ್ ಮಾಡುವ ವ್ಯಕ್ತಿಯು ಸಕ್ಷಮ ಪ್ರಾಧಿಕಾರವು ನೀಡುವ ನಿಗದಿತ ಅರ್ಹತಾ ಪ್ರಮಾಣ ಪತ್ರವನ್ನು ಪಡೆದುಕೊಂಡಿರತಕ್ಕದ್ದು ಹಾಗೂ ಅಧಿಕೃತ ದೃಢೀಕೃತ ಪ್ರತಿಯನ್ನು ಲಗತ್ತಿಸುವುದು.

ಮೀಸಲಾತಿ ಸೌಲಭ್ಯವನ್ನು ಪಡೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರಗಳನ್ನು ತಹಶೀಲ್ದಾರ್ ಮೂಲಕ ಸದರಿ ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನಾಂಕದಿಂದ ಒಂದು ವರ್ಷದೊಳಗಿನ ಪ್ರಮಾಣ ಪತ್ರವನ್ನು ಪಡೆದುಕೊಂಡಿರತಕ್ಕದ್ದು ಹಾಗೂ ಜಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿಯನ್ನು ಲಗತ್ತಿಸುವುದು.

ಸಂದರ್ಶನಕ್ಕೆ ಹಾಜರಾಗುವಾಗ/ ನೇಮಕಾತಿಯ ನಂತರ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವ ಸಂದರ್ಭದಲ್ಲಿ ದಿನಭತ್ಯೆ/ ಪ್ರಯಾಣ ಭತ್ಯೆಯನ್ನು ವಿಶ್ವವಿದ್ಯಾಲಯ ಭರಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಯಾವುದೇ ಸ್ನಾತಕೋತ್ತರ ಕೇಂದ್ರ/ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಾಗಿರಬೇಕು.

ಅಭ್ಯರ್ಥಿ ಅರ್ಜಿ ಸಲ್ಲಿಸುವಾಗ ನೀಡಿರುವ ವಿಳಾಸ ಅಂತಿಮವಾಗಿರುತ್ತದೆ. ನಂತರ ವಿಳಾಸ ಬದಲಾವಣೆಗೆ ಯಾವುದೇ ಪತ್ರ ವ್ಯವಹಾರಗಳಿಗೆ ಅವಕಾಶವಿಲ್ಲ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾಗಿರುವ ಹುದ್ದೆಗಳಿಗೆ ಬೇರೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅರ್ಹರಲ್ಲ.

ವಿವರವಾದ ಅಧಿಸೂಚನೆ, ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು www.rcub.ac.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ; ಕುಲಸಚಿವರು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ವಿದ್ಯಾಸಂಗಮ, ಬೆಳಗಾವಿ 591156, ಕರ್ನಾಟಕ.

English summary
Belagavi Rani Channamma University invited applications for the non teaching staff post. Kalyana Karnataka region candidates can apply for the post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X