27 ಹುದ್ದೆಗಳ ಭರ್ತಿಗೆ ಆರ್‌ಬಿಐನಿಂದ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 31 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ವಿವಿಧ 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನವಾಗಿದೆ.
ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳಿವೆ. ದೇಶಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರಾಥಮಿಕ ಪರೀಕ್ಷೆ, ಭಾಷಾ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಪದವಿಯ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ವಯೋಮಿತಿ 20 ರಿಂದ 28 ವರ್ಷಗಳು 1/1/2018ಕ್ಕೆ ಅನ್ವಯವಾಗುವಂತೆ. ವೇತನ 14,650 ರಿಂದ 34,990 ರೂ.ಗಳು.

ಆರ್‌ಬಿಐ ಒಟ್ಟು 27 ಹುದ್ದೆ ಗಳಿಗೆ, ದೇಶದ ವಿವಿಧ ನಗರಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು 30/1/2018 ರಿಂದ 19/02/2018ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಓದಿ
ಎಚ್‌ಎಎಲ್ ನಲ್ಲಿ ಅರ್ಜಿ ಆಹ್ವಾನ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) 26 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 7, 2018.












Click it and Unblock the Notifications