ಆರ್‌ಬಿಐನಲ್ಲಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಜುಲೈ 30 : ಆರ್‌ಬಿಐ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 10, 2018ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ 30 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಎಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸೆಕೆಂಡ್ ಕ್ಲಾಸ್ ಮಾಸ್ಟರ್ ಡಿಗ್ರಿ ಇನ್ ಹಿಂದಿ/ಹಿಂದಿ ಭಾಷಾಂತರ ವಿತ್ ಇಂಗ್ಲಿಶ್ ಅನ್ನು ಕೋರ್/ಎಲೆಕ್ಟೀವ್ ಅನ್ನು ಮುಖ್ಯ ವಿಷಯವಾಗಿ ಮಾಡಿಕೊಂಡು ಪದವಿ ಪೂರ್ಣಗೊಳಿಸಿರಬೇಕು.
ಪದವಿ ಅಥವ ಸ್ನಾತಕೋತ್ತರ ಪದವಿ ಸಂಸ್ಕೃತ/ಅರ್ಥಶಾಸ್ತ್ರ/ವಾಣಿಜ್ಯ ವಿತ್ ಹಿಂದಿ ಮತ್ತು ಇಂಗ್ಲೀಷ್ ಮುಖ್ಯ ವಿಷಯಗಳು.
ವಯೋಮಿತಿ : ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 21 ರಿಂದ 35 ವರ್ಷದ ವಯೋಮಿತಿ ಇದೆ. ಜುಲೈ 1, 2018ಕ್ಕೆ ಅನ್ವಯವಾಗುವಂತೆ.
ವೇತನ ಶ್ರೇಣಿ
* ಮ್ಯಾನೇಜರ್ ಹುದ್ದೆಗೆ 35150 ರಿಂದ 62,400 ರೂ.ಗಳು.
* ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ 28,150 ರಿಂದ 55,600 ರೂ.ಗಳು.
ಅರ್ಜಿ ಶುಲ್ಕ
* ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 600 ರೂ.
* ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications