ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 199 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಸೆ.22: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ನಿಂದ 199 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 11, 2019 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ)
ಒಟ್ಟು ಹುದ್ದೆ : 199
ಎಲ್ಲಿ ಹುದ್ದೆ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11.10.2019.
ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ.

ವಯೋಮಿತಿ : ಸೆಪ್ಟೆಂಬರ್ 01,2019ರ ಅನ್ವಯ 21 ರಿಂದ 30 ವರ್ಷ ವಯಸ್ಸಿನವರಾಗಿರಬೇಕು. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಿನಾಯಿತಿ ಇದೆ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಒಬಿಸಿ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 850 ರು,
ಎಸ್ ಸಿ /ಎಸ್ ಟಿ ಅಭ್ಯರ್ಥಿಗಳಿಗೆ 100ರು.
ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 21.09.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications