24 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಆರ್‌ಬಿಐ
ಬೆಂಗಳೂರು, ಜನವರಿ 09 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 24 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 27 ಜನವರಿ 2019 ಕೊನೆಯ ದಿನವಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 24 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿವಿಎಲ್ ಇಂಜಿನಿಯರಿಂಗ್‌ನಲ್ಲಿ ಮೂರು ವರ್ಷದ ಡಿಪ್ಲೊಮಾ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಶೇ 65ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು (ಶೇ 55 ಎಸ್‌ಸಿ/ಎಸ್‌ಟಿ/ಅಂಗವಿಕಲ). ಸಿವಿಎಲ್ ಇಂಜಿನಿಯರಿಂಗ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 55 ಅಂಕಗಳೊಂದಿಗೆ ಪದವಿ ಪಡೆದವರು ಅರ್ಜಿ ಹಾಕಬಹುದು (ಶೇ 45ರಷ್ಟು ಅಂಕ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ)

ಜ್ಯೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಮೂರು ವರ್ಷದ ಡಿಪ್ಲೊಮಾವನ್ನು ಎಲೆಕ್ಟ್ರಿಕಲ್ ಅಥವ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 65ರಷ್ಟು ಅಂಕಗಳೊಂದಿಗೆ ಪಡೆದಿರಬೇಕು (ಶೇ 55ರಷ್ಟು ಅಂಕ ಎಸ್‌ಸಿ/ಎಸ್‌ಟಿ/ಅಂಗವಿಕಲ). ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಡ್ ಇಂಜಿನಿಯರಿಂಗ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿ ಹಾಕಬಹುದು ಶೇ 55ರಷ್ಟು ಅಂಕ.(ಶೇ 45ರಷ್ಟು ಅಂಕ ಎಸ್‌ಸಿ/ಎಸ್‌ಟಿ/ಅಂಗವಿಕಲ).
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಜನವರಿ 2019ಕ್ಕೆ ಅನ್ವಯವಾಗುವಂತೆ.
ವೇತನ ಶ್ರೇಣಿ : 21400 ಪ್ರತಿ ತಿಂಗಳು
ಅರ್ಜಿ ಶುಲ್ಕ : ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 450 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ 50 ರೂ.ಗಳು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications