• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

RBI ನೇಮಕಾತಿ 2021: 241 ಹುದ್ದೆಗಳಿಗೆ ಅರ್ಜಿ ಆಹ್ವಾನ

|

ನವದೆಹಲಿ, ಜನವರಿ 25: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) 2021-22ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಫೆಬ್ರವರಿ 12, 2021 ಕೊನೆ ದಿನಾಂಕವಾಗಿದೆ.

ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಒಟ್ಟು ಹುದ್ದೆ: 241

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 12, 2021

ಕರ್ನಾಟಕ ಪೊಲೀಸ್ ನೇಮಕಾತಿ 2021: 545 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ 10ನೇ ತರಗತಿಯಲ್ಲಿ ಪಾಸಾಗಿರಬೇಕು.

ವಯೋಮಿತಿ :

ಕನಿಷ್ಠ: 25 ವರ್ಷ

ಗರಿಷ್ಠ: 45 ವರ್ಷ, ಜನವರಿ 01, 2021ರ ಅನ್ವಯ.

ಸಂಬಳ ನಿರೀಕ್ಷೆ: 10, 940 ರು ಪ್ರತಿ ತಿಂಗಳು

ಅರ್ಜಿ ಶುಲ್ಕ: 50 ರು

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕ:

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 22/01/2021

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12/02/2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

English summary
RBI recruitment 2021 notification has been released on official website for the recruitment of 241 vacancies at Reserve Bank of India (RBI).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X