RBI ನೇಮಕಾತಿ 2021; 322 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜನವರಿ 31: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) 2021-22ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅಧಿಕಾರಿ ಸ್ತರದ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಫೆಬ್ರವರಿ 15, 2021 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಒಟ್ಟು ಹುದ್ದೆ: 322
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 15, 2021
ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ, ಪಿಜಿಡಿಬಿಎ.

ವಯೋಮಿತಿ :
ಕನಿಷ್ಠ: 21 ವರ್ಷ
ಗರಿಷ್ಠ: 34 ವರ್ಷ, ಜನವರಿ 01, 2021ರ ಅನ್ವಯ.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ ಮಾಜಿ ಯೋಧ: 850 ರು
ಎಸ್ ಸಿ/ ಎಸ್ ಟಿ/ ವಿಕಲಚೇತನ: 100ರು
ಸಿಬ್ಬಂದಿ: ಯಾವುದೇ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 28/01/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15/02/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications