RBI ನೇಮಕಾತಿ 2021; 841 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 28: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) 2021-22ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್15, 2021 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ)
ಒಟ್ಟು ಹುದ್ದೆ: 841
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 15, 2021
ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ :
ಕನಿಷ್ಠ: 18ವರ್ಷ
ಗರಿಷ್ಠ: 25 ವರ್ಷ, ಫೆಬ್ರವರಿ 01, 2021ರ ಅನ್ವಯ.
ಸಂಬಳ ನಿರೀಕ್ಷೆ: 10, 940 ರಿಂದ 23, 700/- ಪ್ರತಿ ತಿಂಗಳು.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 450 ರು
ಎಸ್ ಸಿ/ ಎಸ್ ಟಿ: 50ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸುವುದು ಹೇಗೆ?:
ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 24/02/2021 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15/03/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ