RDPR ನೇಮಕಾತಿ 2021: 30 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿ. 29: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 2021ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 11 ಜನವರಿ 2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸತಕ್ಕದ್ದು.
ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ(RDPR)
ಹುದ್ದೆ ಹೆಸರು: Support Engineer, Consultant
ಒಟ್ಟು ಹುದ್ದೆ: 30
ಉದ್ಯೋಗ ಸ್ಥಳ: ಬೆಂಗಳೂರು, ವಿಜಯನಗರ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 11, 2021.

ವಿದ್ಯಾರ್ಹತೆ: ಸಿವಿಎಲ್ ಇಂಜಿನಿಯರಿಂಗ್, ಎಂಎಸ್ಸಿ, ಎಂಎಸ್ ಡಬ್ಲ್ಯೂ, ಬಿ.ಇ, ಎಂಸಿಎ, ಸ್ನಾತಕೋತ್ತರ ಪದವಿ
ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂತೆ ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 45 ವರ್ಷಗಳು. (ಒಬಿಸಿ, ಎಸ್.ಸಿ/ಎಸ್.ಟಿ/ಪ್ರ-1 ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ)
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಇರಲಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವೆಬ್ಸೈಟ್ ಮೂಲಕ ಪಡೆದು ಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಲುಪಿಸಲು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 23-12-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11-01-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications