RDPR Karnataka Recruitment 2023: ಸರ್ಕಾರಿ ಹುದ್ದೆಗಳಿಗೆ ಏ.13ರೊಳಗೆ ಅರ್ಜಿ ಸಲ್ಲಿಸಿ, ಕರ್ನಾಟಕದಲ್ಲೇ ಪೋಸ್ಟಿಂಗ್
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಕೆ ದಿನಾಂಕ, ವಿಧಾನ, ಪೂರ್ಣ ಮಾಹಿತಿ ತಿಳಿಯಿರಿ.
ಬೆಂಗಳೂರು, ಮಾರ್ಚ್ 19: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಸರ್ಕಾರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವವರು ಏಪ್ರಿಲ್ 13ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 6 ಓಂಬುಡ್ಸ್ಪರ್ಸನ್ (Ombudsperson) ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶ ಆಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿ ವೇಳೆ ಸಲ್ಲಿಕೆಯಾಗುವ ದೂರುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಲು ಜೊತೆಗೆ ಜನರ ಕುಂದುಕೊರತೆಗಳ ಪರಿಹಾರಕ್ಕೆ ಈ ಓಂಬುಡ್ಸ್ಪರ್ಸನ್ ಹುದ್ದೆ ರಚನೆ ಮಾಡಲಾಗಿದೆ. ವಿಜಯಪುರದಲ್ಲಿ ತುಮಕೂರು, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು ಮತ್ತು ಗದಗನಲ್ಲಿ ಓಂಬುಡ್ಸ್ಪರ್ಸನ್ ಹುದ್ದೆಗಳು ಖಾಲಿ ಇವೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮುನ್ನ ತಿಳಿಯಬೇಕಾದ ಅಂಶಗಳು, ಅರ್ಜಿ ಸಲ್ಲಿಕೆ ವಿಳಾಸ, ವಿಧಾನ ಮುಂತಾದ ಅಂಶಗಳ ಸಂಪೂರ್ಣ ಮಾಹಿತಿ ಇದೆ.

ಹುದ್ದೆಗಳ ವಿವರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು ಆರು ಹುದ್ದೆಗಳು ಖಾಲಿ ಇವೆ. ವಿದ್ಯಾರ್ಹತೆ ಪರಿಶೀಲನೆಗಾಗಿ ಅಭ್ಯರ್ಥಿಗಳು ಅಧಿಸೂಚನೆ ಪೂರ್ತಿ ಓದಿ, ಪರಿಶೀಲಿಸಿ ಅದರಂತೆ ಅರ್ಹರು ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಆಯ್ಕೆಯಾಗುವವರಿಗೆ ವೇತನ ನಿಗದಿಪಡಿಸಿಲ್ಲ. ಕರ್ನಾಟಕದ ಈ ಮೇಲಿನ ನಿಗದಿ ಜಿಲ್ಲೆಯಲ್ಲಿ ಹುದ್ದೆ ಅಲಂಕರಿಸಬಹುದು. ಆದ್ದರಿಂದ ಕೂಡಲೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಏಪ್ರಿಲ್ 13 ಕೊನೆಯ ದಿನವಾಗಿದೆ.
ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ ನೋಡುವುದಾದರೆ, ಚಾಮರಾಜನಗರ ಜಿಲ್ಲೆಯಲ್ಲಿ 1, ಚಿಕ್ಕಮಗಳೂರು 01, ಗದಗ 01, ಅದೇ ರೀತಿ ಮಂಡ್ಯ 01,ತುಮಕೂರು 01 ಹಾಗೂ ವಿಜಯಪುರ 01 ಹುದ್ದೆಗಳು ಖಾಲಿ ಇವೆ.
ಈ ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ಇಲಾಖೆ ಅಧಿಸೂಚನೆ ತಿಳಿಸಿದೆ. ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎದುರಿಸಬೇಕು. ಅಲ್ಲಿ ಆಯ್ಕೆಯಾಗುವವರಿಗೆ ಬಳಿಕ ಸಂದರ್ಶನ ಇರಲಿದೆ. ಈ ಹುದ್ದೆಗಳಿಗೆ ಇಂತಿಷ್ಟು ವೇತನ ಎಂದು ನಿಗದಿ ಮಾಡಿಲ್ಲ.
ಅರ್ಜಿ ಸಲ್ಲಿಕೆ ವಿಧಾನ
ಅರ್ಹ ಅಭ್ಯರ್ಥಿಗಳು www.rdpr.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಪಡೆಯಬೇಕು. ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಶೈಕ್ಷಣಿಕ ದಾಖಲೆಗಳು, ಅನುಭವ ಪತ್ರ ಮತ್ತು ಸ್ವವಿವರಗಳೊಂದಿಗೆ ಜೊತೆಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಯುಕ್ತರು, ಗ್ರಾಮೀಣಾಭಿವೃದ್ಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಫ್ಲಾಟ್ ನಂ. 1243, ಕೆಎಸ್‌ಐಐಡಿಸಿ ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು-560044 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ 080-22342163 ಗೆ ಕರೆ ಮಾಡುವಂತೆ ಅಧಿಸೂಚನೆ ತಿಳಿಸಿದೆ.












Click it and Unblock the Notifications