ಗ್ರಾ. ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ; 37 ಹುದ್ದೆಗಳು

ಬೆಂಗಳೂರು, ಸೆಪ್ಟೆಂಬರ್ 14 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 21, 2020 ಕೊನೆಯ ದಿನವಾಗಿದೆ.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ NRM Expert, GIS Coordinator ಸೇರಿದಂತೆ ಒಟ್ಟು 37 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 21 ವರ್ಷ ಮೇಲ್ಪಟ್ಟಿರಬೇಕು. 45 ವರ್ಷಕ್ಕಿಂತ ಗರಿಷ್ಠ ವಯೋಮಿತಿ ಹೊಂದಿರಬಾರದು.

RDPR Karnataka Recruitment Apply For 37 Post

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 30 ರಿಂದ 35 ಸಾವಿರ ರೂ. ತನಕ ವೇತನ ನಿಗದಿಮಾಡಲಾಗಿದೆ.

GIS Coordinator ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಇ, ಬಿ.ಟೆಕ್, ಎಂಇ, ಎಂ. ಟೆಕ್, ಎಂ. ಎಸ್‌ಸಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

NRM Expert ಹುದ್ದೆಗೆ ಡಿಪ್ಲೊಮಾ, ಬಿ. ಟೆಕ್ ಮತ್ತು Block Livelihood Expert ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು [email protected] ವಿಳಾಸಕ್ಕೆ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ 080 - 22342163 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ವೆಬ್ ಸೈಟ್ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+