ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾ. ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ; 37 ಹುದ್ದೆಗಳು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 21, 2020 ಕೊನೆಯ ದಿನವಾಗಿದೆ.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ NRM Expert, GIS Coordinator ಸೇರಿದಂತೆ ಒಟ್ಟು 37 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

 ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ನೇಮಕಾತಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ನೇಮಕಾತಿ

ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 21 ವರ್ಷ ಮೇಲ್ಪಟ್ಟಿರಬೇಕು. 45 ವರ್ಷಕ್ಕಿಂತ ಗರಿಷ್ಠ ವಯೋಮಿತಿ ಹೊಂದಿರಬಾರದು.

DHFWS ಕರ್ನಾಟಕ ನೇಮಕಾತಿ: 2815 ಹುದ್ದೆಗಳಿವೆ DHFWS ಕರ್ನಾಟಕ ನೇಮಕಾತಿ: 2815 ಹುದ್ದೆಗಳಿವೆ

RDPR Karnataka Recruitment Apply For 37 Post

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 30 ರಿಂದ 35 ಸಾವಿರ ರೂ. ತನಕ ವೇತನ ನಿಗದಿಮಾಡಲಾಗಿದೆ.

ಬೆಂಗಳೂರು ಜಲಮಂಡಳಿ ನೇಮಕಾತಿ; ಸರ್ವೇಯರ್ ಹುದ್ದೆ ಭರ್ತಿಬೆಂಗಳೂರು ಜಲಮಂಡಳಿ ನೇಮಕಾತಿ; ಸರ್ವೇಯರ್ ಹುದ್ದೆ ಭರ್ತಿ

GIS Coordinator ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಇ, ಬಿ.ಟೆಕ್, ಎಂಇ, ಎಂ. ಟೆಕ್, ಎಂ. ಎಸ್‌ಸಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

NRM Expert ಹುದ್ದೆಗೆ ಡಿಪ್ಲೊಮಾ, ಬಿ. ಟೆಕ್ ಮತ್ತು Block Livelihood Expert ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು [email protected] ವಿಳಾಸಕ್ಕೆ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ 080 - 22342163 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ವೆಬ್ ಸೈಟ್ ವಿಳಾಸ

English summary
Rural Development & Panchayat Raj Department Karnataka invited online applications for the post of NRM Expert, GIS Coordinator Vacancies. Candidates can submit applications till September 21, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X