ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Court Job: ಪಿಯುಸಿ ಪಾಸಾದವರಿಗೆ ತಿಂಗಳಿಗೆ 27,500 ಸಂಬಳ!

|
Google Oneindia Kannada News

ಬೆಂಗಳೂರು, ಜುಲೈ 23: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಗ್ರೇಡ್- ||| (Stenographer Grade-111) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಜುಲೈ 27ರವರೆಗೂ ಅವಕಾಶವಿದೆ. ಆದರೆ ಆನ್‌ಲೈನ್ ಹೊರತುಪಡಿಸಿ ಖುದ್ದಾಗಿ ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಕೋಲ್ ಇಂಡಿಯಾದಲ್ಲಿ 1531 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿವೆಕೋಲ್ ಇಂಡಿಯಾದಲ್ಲಿ 1531 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿವೆ

ಶೀಘ್ರಲಿಪಿಗಾರರ ಒಟ್ಟು ಹುದ್ದೆಗಳು ಎಷ್ಟು? ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಮೀಸಲಾತಿ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ.

ಒಟ್ಟು ಹುದ್ದೆಗಳ ಸಂಖ್ಯೆ ಮತ್ತು ಮೀಸಲಾತಿ ಎಷ್ಟಿದೆ?

ಒಟ್ಟು ಹುದ್ದೆಗಳ ಸಂಖ್ಯೆ ಮತ್ತು ಮೀಸಲಾತಿ ಎಷ್ಟಿದೆ?

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಗ್ರೇಡ್- ||| ಒಟ್ಟು 20 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಒಟ್ಟು 20 ಹುದ್ದೆಗಳ ಪೈಕಿ ಪರಿಶಿಷ್ಟ ಜಾತಿಗೆ 3, ಪರಿಶಿಷ್ಟ ಪಂಗಡಕ್ಕೆ 2, ಪ್ರವರ್ಗ 1ಕ್ಕೆ ಒಂದು, ಪ್ರವರ್ಗ 2ಎ ವರ್ಗಕ್ಕೆ 4, ಪ್ರವರ್ಗ 2ಬಿ ವರ್ಗಕ್ಕೆ ಒಂದು, ಪ್ರವರ್ಗ 3ಎ ವರ್ಗಕ್ಕೆ ಒಂದು, ಪ್ರವರ್ಗ 3ಬಿ ವರ್ಗಕ್ಕೆ 1 ಮತ್ತು ಸಾಮಾನ್ಯ ವರ್ಗಕ್ಕೆ 6 ಹುದ್ದೆಗಳನ್ನು ಮೀಸಲು ಇರಿಸಲಾಗಿದೆ.

ಸಂಬಳ ಮತ್ತು ವಯೋಮಿತಿ ಎಷ್ಟು?

ಸಂಬಳ ಮತ್ತು ವಯೋಮಿತಿ ಎಷ್ಟು?

* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂತೆ ಸಾಮಾನ್ಯ ವರ್ಗದವರಿಗೆ ಕನಿಷ್ಠ ವಯೋಮಿತಿ 18 ವರ್ಷವಾಗಿರಬೇಕು. ಸಾಮಾನ್ಯ ವರ್ಗದ ಗರಿಷ್ಠ ವಯೋಮಿತಿ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 38 ವರ್ಷ ಆಗಿರಬೇಕು. ಅದೇ ರೀತಿ ಪ.ಜಾ ಮತ್ತು ಪ.ಪಂ, ಪ್ರವರ್ಗ-1 ಗರಿಷ್ಠ ವಯೋಮಿತಿ 40 ವರ್ಷ ಆಗಿರುತ್ತದೆ.

* ಶೀಘ್ರಲಿಪಿಗಾರರ ಗ್ರೇಡ್- ||| ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,500 ರೂಪಾಯಿಯಿಂದ 52650 ರೂಪಾಯಿವರೆಗೂ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನು?

ಶೈಕ್ಷಣಿಕ ಅರ್ಹತೆ ಏನು?

* ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ

* ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ

* ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಪ್ರೌಢ ದರ್ಜೆಯ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು

* ಕನ್ನಡ ಮತ್ತು ಇಂಗ್ಲಿಷ್ ಪ್ರೌಢ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು

* ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು

ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಗ್ಗೆ ತಿಳಿಯಿರಿ

ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಗ್ಗೆ ತಿಳಿಯಿರಿ

* ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 05 ನಿಮಿಷಗಳ ಅವಧಿ ಉಕ್ತಲೇಖನವನ್ನು ನೀಡುವರು.

* ಅಭ್ಯರ್ಥಿಯು ಆ ಉಕ್ತಲೇಖನದ ಟಿಪ್ಪಣಿಯನ್ನು 45 ನಿಮಿಷಗಳ ಅವಧಿಯೊಳಗೆ ಲಿಪ್ಯಂತರ ಮಾಡಿ ಬೆರಳಚ್ಚು ಮಾಡಬೇಕು.

* ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಹೊಂದಿದ್ದು, ಉತ್ತೀರ್ಣರಾಗಲು ಕನಿಷ್ಠ 50 ಅಂಕಗಳನ್ನು ನಿಗದಿಪಡಿಸಿರುತ್ತದೆ.

* ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಯ ಒಟ್ಟು ಅಂಕಗಳ ಶೇಕಡವಾರುವಿನ ಮೊತ್ತದ ಆಧಾರದ ಮೇಲೆ 01 (ಒಂದು) ಖಾಲಿ ಹುದ್ದೆಗೆ 05 (ಐದು) ಅಭ್ಯರ್ಥಿಗಳ ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಪಡಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 05 ಅಂಕಗಳನ್ನು ಒಳಗೊಂಡಿರುತ್ತದೆ.

Recommended Video

BS Yediyurappa ನಿರ್ಧಾರದ ಬಗ್ಗೆ ಭಾವುಕರಾದ ಶಾಸಕ ರೇಣುಕಾಚಾರ್ಯ ಹೇಳಿದ್ದೇನು | *Politics | OneIndia Kannada

English summary
Recruitment: Application call to Grade of Stenographer vacancies in Bengaluru Rural District Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X