ಕೊಪ್ಪಳ: ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, ಜೂನ್ 07; ಕೊಪ್ಪಳ ಜಿಲ್ಲೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗೌರವ ಧನದ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು.
ಕೊಪ್ಪಳ ನಗರಸಭೆ ಕಾರ್ಯಾಲಯದ ಡೇ-ನಲ್ಮ್ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಅರ್ಹ ಸ್ವ-ಸಹಾಯ ಗುಂಪು ಅಥವಾ ಒಕ್ಕೂಟಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳ ಸಂಖ್ಯೆ ಒಟ್ಟು 2.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಗೌರವಧನ ಎಷ್ಟು?; ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಗೌರವಧನ ಮಾಸಿಕ 8 ಸಾವಿರ ರೂ.ಗಳು. ಟಿಎ ಗರಿಷ್ಟ ರೂ. 2000 ಗಳನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿದೆ. ವಯೋಮಿತಿ 18 ರಿಂದ 45 ವರ್ಷಗಳು.
ಆಸಕ್ತ ಅಭ್ಯರ್ಥಿಗಳು ಕನಿಷ್ಠ ಪಿ.ಯು.ಸಿ. ಅದಕ್ಕಿಂತ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು). ಪಟ್ಟಣದ ವ್ಯಾಪ್ತಿಯ ಸ್ವ ಸಹಾಯ ಸಂಘದಲ್ಲಿ ಕನಿಷ್ಟ ಮೂರು ವರ್ಷದಿಂದ ಸದಸ್ಯೆಯಾಗಿರಬೇಕು ಅಥವಾ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯೆಯಾಗಿರಬೇಕು.

ಅರ್ಜಿ ಸಲ್ಲಿಕೆ ಮಾಡುವವರು ಸ್ವ-ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿಸಿರಬೇಕು. ಸ್ವ-ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಕಟ್ ಬಾಕಿದಾರರಾಗಿರಬಾರದು. ಸರ್ಕಾರಿ, ಅರೆಸರಕಾರಿ ಅಥವಾ ಎನ್.ಜಿ.ಓ.ಗಳಲ್ಲಿ ಉದ್ಯೋಗಸ್ಥರಾಗಿರಬಾರದು. ಕಾರ್ಯನಿಮಿತ್ಯ ಅಗತ್ಯವಿದ್ದಲ್ಲಿ ಹೊರಸಂಚಾರಕ್ಕೆ ಸಿದ್ದರಿರಬೇಕು.
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಮಿತಿಯ ನಿರ್ಣಯವೇ ಅಂತಿಮವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಗರಸಭೆ ಕಾರ್ಯಾಲಯದ ಡೇ-ನಲ್ಮ್ ಯೋಜನೆಯ ವಿಭಾಗದಲ್ಲಿ ಸಂಪರ್ಕಿಸಿ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ದೃಢೀಕೃತ ದಾಖಲಾತಿಗಳೊಂದಿಗೆ ಜೂನ್ 15ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.












Click it and Unblock the Notifications