ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 9,871 ಹುದ್ದೆಗಳ ನೇಮಕಾತಿ
ಬೆಂಗಳೂರು,ಡಿಸೆಂಬರ್ 25: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.

ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ ಇಲ್ಲಿದೆ
ಗ್ರೂಪ್-ಬಿ
* ಕ್ಲಿನಿಕಲ್ ಇನ್ ಸ್ಟ್ರಕ್ಟರ್ - 01
* ಸಹಾಯಕ ಕೀಟಶಾಸ್ತ್ರಜ್ಞರು - 07
* ಮೈಕ್ರೋಬಯಾಲಜಿಸ್ಟ್ - 12
* ಕ್ಲಿನಿಕಲ್ ಸೈಕಾಲಜಿಸ್ಟ್ - 06
* ಮನೋ ಸಾಮಾಜಿಕ ತಜ್ಞರು ( ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ) - 07
* ಕಿರಿಯ ರಾಸಾಯನ ಶಾಸ್ತ್ರಜ್ಞರು - 15
ಗ್ರೂಪ್-ಸಿ
* ಫಾರ್ಮಸಿಸ್ಟ್ ಅಧಿಕಾರಿ - 640
* ಶುಶ್ರೂಷಾಧಿಕಾರಿ - 1694
* ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ( ಕಿ.ಆ.ಸ - ಮಹಿಳಾ) - 3317
* ಆರೋಗ್ಯ ನಿರೀಕ್ಷಣಾಧಿಕಾರಿ ( ಕಿ.ಆ.ಸ) - 2628
* ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ - 356
* ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ -34
* ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ - 59
* ಹಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ -10
* ನೇತ್ರಾಧಿಕಾರಿ - 125
* ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು - 83
* ಒಟ್ಟು ಹುದ್ದೆಗಳು 8994.
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ವಿವರ
ಗ್ರೂಪ್-ಬಿ
* ಸಹಾಯಕ ಕೀಟಶಾಸ್ತ್ರಜ್ಞರು - 02
* ಮೈಕ್ರೋಬಯಾಲಜಿಸ್ಟ್ - 0
* ಕ್ಲಿನಿಕಲ್ ಸೈಕಾಲಜಿಸ್ಟ್ - 02
* ಮನೋ ಸಾಮಾಜಿಕ ತಜ್ಞರು ( ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ) - 0
* ಕಿರಿಯ ರಾಸಾಯನ ಶಾಸ್ತ್ರಜ್ಞರು - 03
ಗ್ರೂಪ್-ಸಿ
* ಫಾರ್ಮಸಿ ಅಧಿಕಾರಿ - 65
* ಶುಶ್ರೂಷಾಧಿಕಾರಿ - 351
* ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ( ಕಿ.ಆ.ಸ - ಮಹಿಳೆ) - 133
* ಆರೋಗ್ಯ ನಿರೀಕ್ಷಣಾಧಿಕಾರಿ (ಕಿ.ಆ.ಸ) - 221
* ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ - 57
* ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ - 02
* ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ - 30
* ನೇತ್ರಾಧಿಕಾರಿ - 05
* ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ -06
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿಯಿರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ANMS) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ (HIOS) ಹುದ್ದೆಗಳನ್ನು ಕೆಲವು ಷರತ್ತುಗಳಿಗೊಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಅನುಮತಿ ನೀಡಿ ಆದೇಶಿಸಿದ್ದಾರೆ.












Click it and Unblock the Notifications