ಕೊಡಗು: ಕೆಲಸ ಖಾಲಿ ಇದೆ, ವೇತನ 27,100 ರೂ.ಗಳು.
ಮಡಿಕೇರಿ, ಮಾರ್ಚ್ 10: ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 27,100 ರೂ.ಗಳು. ಆಸಕ್ತರು, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 11ರ ಸಂಜೆ 5.30 ಕೊನೆಯ ದಿನವಾಗಿದೆ.
ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯು ಖಾಲಿ ಇದೆ. ಈ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.inರಲ್ಲಿ ಪಡೆದು ಭರ್ತಿ ಮಾಡಿ, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅಂಚೆ ಮೂಲಕ ಸಲ್ಲಿಕೆ ಮಾಡಬೇಕು. ಖಾಲಿ ಇರುವ ಹುದ್ದೆಗಳ ಸಂಖ್ಯೆ 1.
ವಿದ್ಯಾರ್ಹತೆ ಮಾಹಿತಿ: ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಬಿಇ ಅಥವಾ ಟಿಟೆಕ್, ಬಿಸಿಎ ಸ್ಟ್ರೀಮ್, ಕಂಪ್ಯೂಟರ್ ಸೈನ್ಸ್ ಅಥವಾ ಇನ್‍ಫಾರ್ಮೆಷನ್ ಸೈನ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್ ಟೆಲಿಕಾಂ ಪದವಿ ಪಡೆದಿರಬೇಕು.
ಯಾವುದೇ ಸರ್ಕಾರಿ ಕಚೇರಿಯಲ್ಲಿ/ ಕಂಪನಿ/ ಸಂಸ್ಥೆಗಳಲ್ಲಿ ಅನುಭವ ಹೊಂದಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಹೊಸದಾಗಿ ಕೆಲಸ ಹುಡುತ್ತಿರುವವರು ಅರ್ಜಿ ಸಲ್ಲಿಕೆ ಮಾಡಬಹುದು.
ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಕಾಲ ಮಿಷನ್‍ನಿಂದ ನೀಡುವ ಒಟ್ಟು ವೇತನ 27,100 ರೂ.ಗಳು (23,150+1800+1950+200)
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿ ಭಾರತೀಯ ನಾಗರಿಕರಾಗಿರಬೇಕು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ನೇಮಕಾತಿಯು ಕರ್ತವ್ಯ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಬಂಧ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು. ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರಬಾರದು.
ಈ ಹುದ್ದೆಯನ್ನು 1 ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅಂತಿಮ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಪೂರ್ವದಲ್ಲಿ ಯಾವುದೇ ಕಾರಣ ನೀಡದೆ ಈ ಆಯ್ಕೆ ಪ್ರಕ್ರಿಯೆ ಮುಂದೂಡುವ ಅಥವಾ ರದ್ದುಗೊಳಿಸುವ ಸಂಪೂರ್ಣ ಹಕ್ಕನ್ನು ಈ ಪ್ರಾಧಿಕಾರವು ಹೊಂದಿದೆ.
ಆಸಕ್ತರು ಹೆಚ್ಚಿನ ಮಾಹಿತಿಗೆ ಕಚೇರಿ ವಿಳಾಸಕ್ಕೆ ಕಚೇರಿ ಸಮಯದಲ್ಲಿ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು. ಅಭ್ಯರ್ಥಿಯ ಸ್ವ-ವಿವರ, 10ನೇ ತರಗತಿ ಅಂಕಪಟ್ಟಿ, ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ/ ದಾಖಲೆ, ನೇಮಕಾತಿ ಆದೇಶ, ಅನುಭವ ಪ್ರಮಾಣ ಪತ್ರ ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಕೊನೆಯ ದಿನಾಂಕದೊಳಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.
ನಿಗದಿಪಡಿಸಿದ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಕೆ ಮಾಡಲು ವಿಳಾಸ ಜಿಲ್ಲಾಧಿಕಾರಿ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ.












Click it and Unblock the Notifications