ಗದಗ: ಕೆಲಸ ಖಾಲಿ ಇದೆ, 12 ಒಟ್ಟು ಹುದ್ದೆಗಳು, ವಿವರ
ಗದಗ, ಫೆಬ್ರವರಿ 02: ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಅಗ್ನಿ ಶಾಮಕ ಠಾಣೆಗೆ ಅಧಿಕಾರಿ/ ಸಿಬ್ಬಂದಿಗಳ ನಿಯೋಜನೆ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಸಪ್ಟೆಂಬರ್ 2024ರಲ್ಲಿ ಈ ಠಾಣೆಯ ಕಾಮಗಾರಿಯು ಮುಕ್ತಾಯಗೊಂಡಿದ್ದು, ಅಗ್ನಿ ಶಾಮಕ ಇಲಾಖೆಯ ವಶಕ್ಕೆ ವಹಿಸಲಾಗಿದೆ. ಕೆಲವೇ ದಿನಗಳಲ್ಲಿ ಸಿಬ್ಬಂದಿ ನಿಯೋಜನೆ ಬಳಿಕ ಈ ಠಾಣೆ ಕಾರ್ಯಾರಂಭ ಮಾಡಲಿದೆ.
ಈ ನೇಮಕಾತಿ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಬಿ. ಕೆ. ಭುವನೇಂದ್ರ ಕುಮಾರ್, ಸರ್ಕಾರದ ಅಧೀನ ಕಾರ್ಯದರ್ಶಿ ಒಳಾಡಳಿತ ಇಲಾಖೆ (ಪೊಸಸೇ) ಆದೇಶವನ್ನು ಹೊರಡಿಸಿದ್ದಾರೆ.

ಯಾವ-ಯಾವ ಹುದ್ದೆಗಳು?; ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಅಗ್ನಿಶಾಮಕ ಠಾಣೆಗೆ 12 ಹುದ್ದೆಗಳನ್ನು ಸೃಜಿಸಲು ಸರ್ಕಾರವು ಮಂಜೂರಾತಿಯನ್ನು ನೀಡಿ ಆದೇಶಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇವುಗಳಲ್ಲಿ ನಿಯೋಜನೆ ಮೇರೆಗೆ ಅಗ್ನಿ ಶಾಮಕ ಠಾಣಾಧಿಕಾರಿ 1, ಪ್ರಮುಖ ಅಗ್ನಿಶಾಮಕ 1, ಅಗ್ನಿ ಶಾಮಕರು 6 ಹುದ್ದೆಗಳು. ಹೊರಗುತ್ತಿಗೆ ಆಧಾರದ ಮೇಲೆ ಅಗ್ನಿಶಾಮಕ ಚಾಲಕರು 4 ಹುದ್ದೆಗಳು. ಸದರಿ ಅಗ್ನಿಶಾಮಕ ಠಾಣೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಇತರ ಉಪಕರಣಗಳನ್ನು ಆಯವ್ಯಯ ಲೆಕ್ಕಶೀರ್ಷಿಕೆ 2070-00-108-1-01ರಡಿ ಒದಗಿಸಿರುವ ಅನುದಾನದ ಮಿತಿಯಲ್ಲಿ ಹಂತ ಹಂತವಾಗಿ ಖರೀದಿಸತಕ್ಕದ್ದು. ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ದಿನಾಂಕ 08-01-2025ರ ಸಹಮತಿಯ ಮೇರೆಗೆ ಹೊರಡಿಸಲಾಗಿದೆ ಎಂದು ಹೇಳಿದೆ.
ಅಗ್ನಿ ಶಾಮಕ ಠಾಣೆ ನಿರ್ಮಾಣ: ಕೆಲವು ದಿನಗಳ ಹಿಂದೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ಅಗ್ನಿ ಶಾಮಕ ಠಾಣೆ ಸ್ಥಾಪನೆಗೆ ಅಧಿಕಾರಿ/ ಸಿಬ್ಬಂದಿಗಳ ಸೃಜನೆ ಹಾಗೂ ವಾಹನ ಉಪಕರಣಗಳ ಮಂಜೂರಾತಿ ನೀಡುವ ಬಗ್ಗೆ ಆದೇಶವನ್ನು ಹೊರಡಿಸಲಾಗಿತ್ತು.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಕೆ-ಸೇಫ್-2 ಯೋಜನೆಯಡಿ 2022-23ನೇ ಸಾಲಿನಲ್ಲಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ 3 ಬೇ ಅಗ್ನಿಶಾಮಕ ಠಾಣಾ ಕಟ್ಟಡವನ್ನು ನಿರ್ಮಿಸಲು ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಸದರಿ ಮೊತ್ತವನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಅವರಿಗೆ ಪಾವತಿಸಲಾಗಿತ್ತು.
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಗಜೇಂದ್ರಗಡ ತಾಲೂಕಿನಲ್ಲಿ 3 ಬೇ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ದಿನಾಂಕ 24-05-2023ರಂದು ಪ್ರಾರಂಭಿಸಿದ್ದು, ಸಪ್ಟೆಂಬರ್ 2024ರಂದು ಕಟ್ಟಡ ಕಾಮಗಾರಿಯು ಮುಕ್ತಾಯಗೊಂಡಿದ್ದು, ಅಗ್ನಿಶಾಮಕ ಇಲಾಖೆಯ ವಶಕ್ಕೆ ಪಡೆಯುವಂತೆ ತಿಳಿಸಲಾಗಿತ್ತು.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಕೆ-ಸೇಫ್-2 ಯೋಜನೆಯಡಿ 2022-23ನೇ ಸಾಲಿನಲ್ಲಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ 3 ಬೇ ಅಗ್ನಿಶಾಮಕ ಠಾಣಾ ಕಟ್ಟಡವನ್ನು ನಿರ್ಮಿಸಲು ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು, ಅನುದಾನ ಬಿಡುಗಡೆ ಮಾಡಿ ಆದೇಶಿಸಲಾಗಿತ್ತು.
ಕಾಮಗಾರಿಯು ಮುಕ್ತಾಯಗೊಂಡ ಬಳಿಕ ವಾಹನ/ ಉಪಕರಣಗಳೊಂದಿಗೆ ಅಧಿಕಾರಿ/ ಸಿಬ್ಬಂದಿಗಳ ಹುದ್ದೆಗಳನ್ನು ಸೃಜಿಸಿ, ಮಂಜೂರಾತಿ ನೀಡುವಂತೆ ಹಾಗೂ ಅಗ್ನಿಶಾಮಕ ಠಾಣೆಗೆ ಅಗತ್ಯವಿರುವ ಹುದ್ದೆಗಳ ಸೃಜನೆಗೆ ಉಂಟಾಗುವ ಆವರ್ತಕ ವೆಚ್ಚ ಹಾಗೂ ಅನಾವರ್ತಕ ವೆಚ್ಚಗಳ ಒಟ್ಟು ಮೊತ್ತ ರೂ. 4,83,84,932 ವೆಚ್ಚವನ್ನು ಲೆಕ್ಕಶೀರ್ಷಿಕ 2070-00-108-1-01 ಅಗ್ನಿಶಾಮಕ ಸೇವೆಗಳ ನಿರ್ದೇಶಕರು ಈ ಅನುದಾನದಿಂದ ಭರಿಸಲಾಗುತ್ತದೆ ಎಂದು ತಿಳಿಸುತ್ತಾ, ಮಂಜೂರಾತಿ ನೀಡುವಂತೆ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಇವರು ಕೋರಿದ್ದರು.












Click it and Unblock the Notifications