ಶಿವಮೊಗ್ಗ; ಎನ್‍ಹೆಚ್‍ಎಂ ಅಡಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 12; ರಾಷ್ಟ್ರೀಯ ಆರೋಗ್ಯ ಅಭಿಯಾನದ 2023-24ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಅರ್ಜಿಗಳ ವಿತರಣೆ, ಮೂಲ ದಾಖಲೆಗಳ ಪರಿಶೀಲನೆ ದಿನಾಂಕದ ವಿವರ ಇಲ್ಲಿದೆ.

National Health Mission (NHM) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Recruitment For Various Post Under NHM At Shivamogga

ಎನ್‍ಹೆಚ್‍ಎಂ/ ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ಈ ಹುದ್ದೆಗಳಿಗೆ ನೇಮಕಾತಿಯನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಹುದ್ದೆಗಳಿಗೆ ನಮೂದಿಸಿರುವ ವೇತನದಲ್ಲಿ ತಜ್ಞ ವೈದ್ಯರಿಗೆ ಮತ್ತು ವೈದ್ಯರಿಗೆ ಆದಾಯ ತೆರಿಗೆ ಹಾಗೂ ಉಳಿದ ಹುದ್ದೆಗಳಿಗೆ ಭವಿಷ್ಯನಿಧಿ/ ವೃತ್ತಿ ತೆರಿಗೆ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಪ್ರಕಾರ ತೆರಿಗೆ ಇತ್ಯಾದಿ ಕಟಾವಣೆ ಮಾಡಲಾಗುತ್ತದೆ.

ಖಾಲಿ ಇರುವ ಹುದ್ದೆಗಳು; ಇಎನ್‍ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ 15/07/2023ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ. ಸಹಾಯಕರ ಹುದ್ದೆಗಳಿಗೆ ದಿ 18/7/2023ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಅರ್ಜಿ ನಮೂನೆಗಳನ್ನು ವಿತರಣೆ ಮಾಡಲಾಗುತ್ತದೆ.

ಅರ್ಜಿಗಳನ್ನು ಎನ್‍ಹೆಚ್‍ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್‍ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುತ್ತದೆ. ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30ರ ತನಕ ನಡೆಸಲಾಗುತ್ತದೆ.

ತಜ್ಞ ವೈದ್ಯರು ಮತ್ತು ವೈದ್ಯರು 70 ವರ್ಷಕ್ಕಿಂತ ಕಡಿಮೆ ಇದ್ದು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು. ಕೆಎಂಸಿಯ ನೋಂದಣಿಯನ್ನು ಹೊಂದಿರತಕ್ಕದ್ದು. ಸರ್ಕಾರದ ನಿಯಮಾವಳಿಯಂತೆ ಎನ್‍ಹೆಚ್‍ಎಂ/ ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುತ್ತದೆ.

ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ಕಿ.ಪು.ಆ ಸಹಾಯಕರ ಹುದ್ದೆಗೆ ಸಂಬಂಧಿಸಿದಂತೆ ವಾಸಸ್ಥಳದ ಬಗ್ಗೆ ಪಾಲಿಕೆ/ ಸಂಬಂಧಿಸಿದ ಪಂಚಾಯತ್‍ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರದೊಂದಿಗೆ ಹಾಜರಾಗಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200337 ಅನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+