ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ: ಕೃಷ್ಣ ಬೈರೇಗೌಡ
ಬೆಂಗಳೂರು, ಫೆಬ್ರವರಿ.19: ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
"ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆ ಮಾಡಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ" ಎಂಬ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೂಡ್ಲಿ ಹೇಳಿದ್ದಾರೆ. ಇದಕ್ಕೆ ಸಚಿವರು ಉತ್ತರಿಸಿದ್ದಾರೆ.

"ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು" ಎಂದು ಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.
"ಇತರ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಯಲ್ಲಿ ನೌಕರರ ಸಂಖ್ಯೆ ಅಧಿಕವಿದೆ. ಅಲ್ಲದೆ, ಸಾರ್ವಜನಿಕರಿಗೆ ಶೀಘ್ರ ಸೇವೆ ನೀಡುವ ಉದ್ದೇಶಿದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಹಸಿರು ನಿಶಾನೆ ಕೊಟ್ಟಿದ್ದಾರೆ" ಎಂದು ಮಾಹಿತಿ ತಿಳಿಸಿದ್ದಾರೆ.

ನೌಕರರು ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ
"ಸರ್ಕಾರಕ್ಕೆ ಸಾರ್ವಜನಿಕರ ಹಿತ ಮುಖ್ಯ. ಹೀಗಾಗಿ ಕಂದಾಯ ಇಲಾಖೆ ನೌಕರರು ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ. ಅವರು ಸರ್ಕಾರ ನೌಕರಿ ಕೊಟ್ಟ ಕಡೆ ಕೆಲಸ ಮಾಡಲಿ. ಕಳೆದ ಸರ್ಕಾರ ತುಂಬಾ ಜನರನ್ನು ಬೇರೆಡೆ ನಿಯೋಜನೆ ಮಾಡಿದ್ದಾರೆ.
ನನಗೂ ಕನಿಷ್ಠ 2000 ಉದ್ಯೋಗಿಗಳ ನಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ಆದರೆ, ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ. ಯಾರನ್ನೂ ಮೂಲ ಸ್ಥಾನದಿಂದ ನಿಯೋಜನೆಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜನರಿಗೆ ಸರಳ ಹಾಗೂ ಶೀಘ್ರ ಸೇವೆ ಒದಗಿಸಲು ಸೂಚಿಸಲಾಗಿದೆ" ಎಂದಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications