ಭರ್ಜರಿ ಗುಡ್‌ನ್ಯೂಸ್: 18,500 ಶಿಕ್ಷಕರ ಹುದ್ದೆ ನೇಮಕಾತಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಚಾಮರಾಜನಗರ, ಸೆಪ್ಟೆಂಬರ್ 17: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ 18,500 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಚಾಮರಾಜನಗರದಲ್ಲಿ ಮಾತನಾಡಿ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಹಿಂದಿನ ಬಿಜೆಪಿ ಸರ್ಕಾರ ಕೇವಲ 5,428 ಶಿಕ್ಷಕರನ್ನು ನೇಮಿಸಿತ್ತು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದು ಮತ್ತು 800 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದು ಮಧು ಬಂಗಾರಪ್ಪ ಅವರು ಹೇಳಿದರು. ಶಾಲಾ ಕೊಠಡಿಗಳ ಶಿಥಿಲಾವಸ್ಥೆ ಕುರಿತು ಮಾತನಾಡಿ, ಇದು ಕೇವಲ ನಮ್ಮ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾದ ಸಮಸ್ಯೆಯಲ್ಲ. ರಾಜ್ಯದಲ್ಲಿ46 ಸಾವಿರ ಶಾಲೆಗಳಿದ್ದು, ಎಲ್ಲಾ ಶಾಲೆಗಳಲ್ಲೂ ಸಮಸ್ಯೆಗಳಿಲ್ಲ ಎಂದು ಹೇಳುತ್ತಿಲ್ಲ. ಈ ಹಿಂದಿನ ಸರ್ಕಾರ ಯಾವುದೇ ಕೊಠಡಿಯನ್ನು ಕಟ್ಟಿಲ್ಲ. ನೇಮಕ ಕೂಡ ಮಾಡಿಲ್ಲ. ನಾವೂ ಅಧಿಕಾರಕ್ಕೆ ಬಂದ ಮೇಲೆ ವಿವೇಕ ಯೋಜನೆಯಡಿ 8,200 ಕೊಠಡಿ ಪೂರ್ಣ ಮಾಡಿದ್ದೇವೆ. ಮತ್ತೆ 3000 ಸಾವಿರ ಕೊಠಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು. 2025-26ನೇ ಶೈಕ್ಷಣಿಕ ಸಾಲಿನಲ್ಲಿ 35 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ
ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ ಅವರು, ನಾವೆಲ್ಲ ಭಾರತೀಯರು. ಯಾರೇ ಪಾಕಿಸ್ತಾನ ಜಿಂದಾಬಾದ್ ಅಂದರೆ ಸಹಿಸಲು ಸಾಧ್ಯವಿಲ್ಲ. ಇದಕ್ಕೆ ಸಂವಿಧಾನ ಪೀಠಿಕೆ ಬಿಜೆಪಿಯವರ ತಲೆಯಲ್ಲಿ ಬರಲಿಲ್ಲ. ಭಾರತದ ಸಂವಿಧಾನವನ್ನು ಈಗಿನ ಒಂದನೇ ತರಗತಿ ಮಕ್ಕಳು ಹೇಳುವ ಹಾಗೆ ಸಿದ್ದರಾಮಯ್ಯ ಸರ್ಕಾರ ಮಾಡಿದೆ ಎಂದು ಹೇಳಿದರು.












Click it and Unblock the Notifications