ತುಮಕೂರು; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ಭರ್ತಿ

ತುಮಕೂರು, ಆಗಸ್ಟ್ 11; ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 73 ಅಂಗನವಾಡಿ ಕಾರ್ಯಕರ್ತೆ ಮತ್ತು 285 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 4 ಕೊನೆಯ ದಿನವಾಗಿದೆ.

ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಣೆ ಮಾಡುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.

Recruitment Of Anganwadi Worker And Helper Post Tumakuru

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಒಂದು ವೇಳೆ ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಅರ್ಜಿ ಸಲ್ಲಿಸಿದ್ದಲ್ಲಿ ಎಲ್ಲಾ ಅರ್ಜಿಗಳನ್ನು ಬದಿಗೊತ್ತಿ ಅಂತಹ ಅರ್ಜಿಗಳಿಗೆ ಆದ್ಯತೆ ನೀಡಲಾಗುತ್ತದೆ.

ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ. ವಿಧವೆಯರು ವಾಸಸ್ಥಳದ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಿದಾಗ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣನೆ ಮಾಡಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 3 ರಿಂದ 6 ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಬೇಕು.

ಚಟುವಟಿಕೆಗಳ ವೇಳೆಯಲ್ಲಿ ಮಕ್ಕಳನ್ನು ಎತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕು. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ಕಾರ್ಯ ನಿರ್ವಹಣೆ ಮಾಡಬೇಕು. ಆದ್ದರಿಂದ ಕಿವುಡರು, ಮೂಕರು, ಬುದ್ಧಿಮಾಂದ್ಯರು ಕಾರ್ಯಕರ್ತೆ ಹುದ್ದೆಗೆ ಅರ್ಹರಲ್ಲ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವೆಬ್‌ಸೈಟ್‌ https://anganwadirecruit.kar.nic.in/

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+