ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಉದ್ಯೋಗ ಮೇಳ; ನಿಮ್ಮ ಹೆಸರು ನೋಂದಾಯಿಸಿ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 17 : ಶಿವಮೊಗ್ಗ ನಗರದಲ್ಲಿ ಫೆಬ್ರವರಿ 24 ಮತ್ತು 25ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ. 64 ಕಂಪನಿಗಳು ಮೇಳದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿದ್ದು, 150ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಉದ್ಯೋಗ ಮೇಳದ ಸಿದ್ಧತೆಗಳ ಪೂರ್ವಭಾವಿ ಸಭೆಯನ್ನು ನಡೆಸಿದರು. "10ಸಾವಿರ ಉದ್ಯೋಗಾರ್ಥಿಗಳು ಮೇಳದಲ್ಲಿ ಭಾಗವಹಿಸುವ ಗುರಿಯನ್ನು ಹೊಂದಲಾಗಿದ್ದು, ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ನಡೆಸುವಂತೆ" ಸೂಚನೆ ನೀಡಿದರು.

ಕೆಪಿಎಸ್‌ಸಿ ನೇಮಕಾತಿ; 925 ಹುದ್ದೆಗಳ ಭರ್ತಿ ಕೆಪಿಎಸ್‌ಸಿ ನೇಮಕಾತಿ; 925 ಹುದ್ದೆಗಳ ಭರ್ತಿ

ಉದ್ಯೋಗ ಮೇಳಕ್ಕೆ ಈಗಾಗಲೇ 4200 ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿದ್ದಾರೆ. 64 ಕಂಪನಿಗಳು ಈಗ ಹೆಸರು ನೋಂದಾಯಿಸಿವೆ. 150ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆಇದೆ.

ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ

jobs

ಆಸಕ್ತ ಕಂಪನಿಗಳು ಭಾಗವಹಿಸುವಂತೆ ಕೋರಿ ದೊಡ್ಡ ಕಂಪನಿಗಳಿಗೆ ಆಹ್ವಾನ ನೀಡುವಂತೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಉದ್ಯಮಿಗಳನ್ನು, ಕೈಗಾರಿಕೆಗಳನ್ನು ಆಹ್ವಾನಿಸುವಂತೆ ಅವರು ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಸಂಸ್ಥೆ ಅವರಿಗೆ ತಿಳಿಸಿದರು.

ಜ್ಯೋತಿಷ್ಯ: ಯಾರಿಗೆ ಯಾವ ಉದ್ಯೋಗ- ವೃತ್ತಿ, ವ್ಯಾಪಾರ ಸೂಕ್ತ? ಇಲ್ಲಿದೆ ಮಾಹಿತಿ ಜ್ಯೋತಿಷ್ಯ: ಯಾರಿಗೆ ಯಾವ ಉದ್ಯೋಗ- ವೃತ್ತಿ, ವ್ಯಾಪಾರ ಸೂಕ್ತ? ಇಲ್ಲಿದೆ ಮಾಹಿತಿ

ಶಿವಮೊಗ್ಗ ನಗರದ ಎನ್‌ಇಎಸ್ ಕಾಲೇಜು ಮೈದಾನದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಅಗತ್ಯ ಎಲ್ಲಾ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಪ್ರತಿ ಕಂಪನಿಗಳಿಗೆ ಸಂದರ್ಶನ ಆಯೋಜಿಸಲು ಸಾಧ್ಯವಾಗುವಂತೆ ಕೊಠಡಿಗಳನ್ನು ಒದಗಿಸಬೇಕು ಎಂದು ಹೇಳಿದರು.

ಸ್ಥಳದಲ್ಲಿಯೇ ಕಂಪ್ಯೂಟರ್ ಜ್ಞಾನ ಪರೀಕ್ಷೆ ನಡೆಸಲು ಸಾಧ್ಯವಾಗುವಂತೆ ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಬಳಸಿಕೊಳ್ಳಬಹುದಾಗಿದೆ. ಎಲ್ಲಾ ಅಭ್ಯರ್ಥಿಗಳಿಗೆ ಬಾರ್‌ಕೋಡ್ ಹೊಂದಿರುವ ಗುರುತಿನ ಪತ್ರವನ್ನು ನೀಡಲಾಗುತ್ತದೆ.

ಕಂಪನಿಗಳ ಪ್ರತಿನಿಧಿಗಳಿಗೆ ವಾಸ್ತವ್ಯದ ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಭ್ಯರ್ಥಿಗಳಿಗೆ ಮಧ್ಯಾಹ್ನ ಲಘು ಭೋಜನ ವ್ಯವಸ್ಥೆ ಮಾಡಲಾಗುತ್ತದೆ. ಸಮರ್ಪಕ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸಂಪೂರ್ಣ ಸ್ವಚ್ಛತೆಯ ವ್ಯವಸ್ಥೆಯನ್ನು ಮಹಾನಗರ ಪಾಲಿಕೆ ವತಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಉದ್ಯೋಗ ಮೇಳದ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪೂರ್ತಿಯನ್ನು ನೀಡುವಂತಹ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು. ಇದರಲ್ಲಿ ಪದವಿ ಅಂತಿಮ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವಂತೆ ಸೂಚನೆ ನೀಡಲಾಗುತ್ತದೆ.

ಮುಖ್ಯಮಂತ್ರಿಗಳು ಉದ್ಯೋಗ ಮೇಳವನ್ನು ಉದ್ಘಾಟಿಸುವ ಸಾಧ್ಯತೆಯಿದ್ದು, ಶಿಷ್ಟಾಚಾರದ ಪ್ರಕಾರ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು www.shimogaudyogamela.in ವೆಬ್ ಸೈಟ್ ಮೂಲಕ ಹೆಸರು ನೋಂದಾಯಿಸಬಹುದು.

English summary
Job fair organized in Shivamogga on February 24 and 25. 64 company's registered for job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X