ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತಾಂತರ ನಿರಾಕರಿಸುವ ವರದಿ; ಹೊಸದುರ್ಗ ತಹಶೀಲ್ದಾರ್ ವರ್ಗಾವಣೆ?

|
Google Oneindia Kannada News

ಚಿತ್ರದುರ್ಗ, ಡಿಸೆಂಬರ್ 17; ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರದ ಬಗ್ಗೆ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದರು. ಶಾಸಕರ ಆರೋಪವನ್ನು ತಳ್ಳಿಹಾಕುವಂತಹ ವರದಿಯನ್ನು ನೀಡಿದ್ದ ತಹಶೀಲ್ದಾರ್ ತಿಪ್ಪೇಸ್ವಾಮಿಯನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ತಾಲೂಕಿನ ಮಾರುತಿ ನಗರ, ಶಾಂತಿ ನಗರದಲ್ಲಿ ಬಲವಂತವಾಗಿ ಕ್ರೈಸ್ತ್ರ ಧರ್ಮಕ್ಕೆ ಮತಾಂತರ ನಡೆಯುತ್ತಿದೆ ಎಂದು ಶಾಸಕರು ಆರೋಪ ಮಾಡಿದ್ದರು. ಈ ಕುರಿತು ಸರ್ಕಾರ ವರದಿಯನ್ನು ಕೇಳಿತ್ತು.

ಮತಾಂತರ ಕುರಿತು ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಸುಳ್ಳು ಹೇಳಿಕೆ: ಸುಲೇಮಾನ್ ರಾಜಕುಮಾರ್ಮತಾಂತರ ಕುರಿತು ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಸುಳ್ಳು ಹೇಳಿಕೆ: ಸುಲೇಮಾನ್ ರಾಜಕುಮಾರ್

ನವೆಂಬರ್ 30ರಂದು ಜಿಲ್ಲಾಧಿಕಾರಿಗಳ ಮೂಲಕ ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿ ವರದಿಯನ್ನು ನೀಡಿದ್ದರು. ಶಾಸಕರ ಆರೋಪವನ್ನು ಅಲ್ಲಗಳೆಯುವಂತಹ ವರದಿಯನ್ನು ಜಿಲ್ಲಾಡಳಿತ ನೀಡಿತ್ತು. ಇದರಿಂದಾಗಿ ಶಾಸಕರಿಗೆ ಮುಜುಗರ ಉಂಟಾಗಿತ್ತು.

ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಸೇರಿದಂತೆ ನಾಲ್ಕು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಸೇರಿದಂತೆ ನಾಲ್ಕು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್

Report On Forced Conversions Hosadurga Tehsildar Y Thippeswamy Transferred

ಈಗ ತಹಶೀಲ್ದಾರ್ ತಿಪ್ಪೇಸ್ವಾಮಿ ವರ್ಗಾವಣೆಯಾಗಿದ್ದು, ನೂತನ ತಹಶೀಲ್ದಾರ್ ಆಗಿ ಮಲ್ಲಿಕಾರ್ಜುನ್ ನೇಮಕ ಮಾಡಲಾಗಿದೆ. ತಿಪ್ಪೇಸ್ವಾಮಿಗೆ ಹೊಸ ಜಾಗವನ್ನು ನೀಡಿದೆ ವರ್ಗಾವಣೆಗೊಳಿಸಲಾಗಿದೆ. ವರ್ಗಾವಣೆ ಹಿಂದೆ ಶಾಸಕರ ಕೈವಾಡವಿದೆ ಎಂದು ಅಂದಾಜಿಸಲಾಗಿದೆ.

ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲ ಇಲ್ಲ: ಎಚ್.ಡಿ. ಕುಮಾರಸ್ವಾಮಿಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲ ಇಲ್ಲ: ಎಚ್.ಡಿ. ಕುಮಾರಸ್ವಾಮಿ

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿಯೇ ಮತಾಂತಗೊಂಡಿದ್ದರು. ಬಳಿಕ ಅವರು ಸೇರಿದಂತೆ ಹಲವರನ್ನು ಹಿಂದು ಧರ್ಮಕ್ಕೆ ಕರೆತರಲಾಗಿತ್ತು. ಆದರೆ ತಹಶೀಲ್ದಾರ್ ತಮ್ಮ ವರದಿಯಲ್ಲಿ ಬಲವಂತದ ಮತಾಂತರ ನಡೆಯುತ್ತಿಲ್ಲ ಎಂದು ಜನರೇ ಹೇಳಿದ್ದಾರೆ ಎಂದು ಉಲ್ಲೇಖಿಸಿದ್ದರು. ಈ ಹಿನ್ನಲೆಯಲ್ಲಿ ಶಾಸಕರಿಗೆ ಮಜುಗರವಾಗಿತ್ತು.

ಬೆಳಗಾವಿ ಅಧಿವೇಶನ; ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಪ್ರಯತ್ನ ನಡೆಸುತ್ತಿದೆ. ಈ ಸಮಯದಲ್ಲಿಯೇ ಹೊಸದುರ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಕ್ರೈಸ್ತ ಸಮುದಾಯದಿಂದ ಶುಕ್ರವಾರ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಬೆಳಗ್ಗೆ 10 ಗಂಟೆಗೆ ಉಪವಾಸ ಸತ್ಯಾಗ್ರಹ ಆರಂಭವಾಗಿದ್ದು ಸಂಜೆ 4 ಗಂಟೆಯ ತನಕ ನಡೆಯಲಿದೆ.

ಈ ಪ್ರತಿಭಟನಾ ಸಭೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ನೀಡಲಾಗಿದೆ.

ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ ಜತ್ತನ್ನ್ ನೇತೃತ್ವದಲ್ಲಿ ಈ ಹೋರಾಟ ನಡೆಯುತ್ತಿದೆ. ಮತಾಂತರ ನಿಷೇಧ ಕಾಯ್ದೆ ಮೂಲಕ ಕ್ರೈಸ್ತ ಸಮುದಾಯದ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಬಸವರಾಜ ಬೊಮ್ಮಾಯಿ ಹೇಳಿಕೆ; ಮತಾಂತರ ನಿಷೇಧ ಕಾಯ್ದೆ ಬಗ್ಗೆ ರಾಜ್ಯದಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಹಿಂದೂ, ಕ್ರಿಶ್ಚಿಯನ್, ಇಸ್ಲಾಂ ಹಾಗೂ ಸಿಖ್ ಧರ್ಮಗಳು ಸಂವಿಧಾನದಲ್ಲಿ ಗುರುತಿಸಲಾಗಿರುವ ಧರ್ಮಗಳಾಗಿದ್ದು, ಅವರ ಪ್ರಾರ್ಥನೆ, ಆಚರಣೆಗಳಿಗೆ ಯಾವುದೇ ತೊಂದರೆ ಇಲ್ಲ" ಎಂದು ಸ್ಪಷ್ಟಪಡಿಸಿದ್ದರು.

"ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ.ಮತಾಂತರದ ವಿಷಯ ಇಂದಿನದಲ್ಲ, ಈ ಬಗ್ಗೆ ಸ್ವತಂತ್ರದ ನಂತರದಲ್ಲಿ ಬಹಳ ದೊಡ್ಡ ಚರ್ಚೆಯಾಗಿದೆ. ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ" ಎಂದು ಮುಖ್ಯಮಂತ್ರಿಗಳು ಹೇಳಿದ್ದರು.

ಬಹುಜನರ ಅಪೇಕ್ಷೆಯಾಗಿದೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎನ್ನುವುದು ಕರ್ನಾಟಕದ ಬಹುತೇಕ ಜನರ ಅಪೇಕ್ಷೆ ಆಗಿದೆ. ಈ ಹಿನ್ನಲೆಯಲ್ಲಿ ಕಾನೂನು ಇಲಾಖೆ ಪರಿಶೀಲನೆ ಮಾಡುತ್ತಿದೆ. ಪರಿಶೀಲನೆಯ ನಂತರ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡನೆಯಾಗಲಿದೆ.ಕಾನೂನು ಇಲಾಖೆ ಕರಡು ಕಾಯ್ದೆಗೆ ಒಪ್ಪಿಗೆ ನೀಡಿದಲ್ಲಿ ಅಧಿವೇಶನದಲ್ಲಿ ವಿಷಯ ಚರ್ಚೆಗೆ ಬರಲಿದೆ" ಎಂದು ತಿಳಿಸಿದ್ದರು.

"ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಬಡವರು, ದೀನದಲಿತರು ಅದಕ್ಕೆ ಒಳಗಾಗಬಾರದು. ಅವರ ಮನೆತನ, ಕುಟುಂಬದಲ್ಲಿ ಬಹಳಷ್ಟು ತೊಂದರೆಯಾಗುವುದರಿಂದ ಮತಾಂತರ ನಿಷೇಧ ಕಾಯ್ದೆಯನ್ನು ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡಲಿದೆ" ಹೇಳಿದ್ದರು.

English summary
Chitradurga district Hosadurga tehsildar Y. Thippeswamy transferred. Who filed a report saying there were no forced conversions. Hosadurga BJP MLA Guli Hatti Shekar alleged forced conversions in assembly seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X