ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಬಿಐ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 14 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30, 2018 ಕೊನೆಯ ದಿನವಾಗಿದೆ.

ಆರ್‌ಬಿಐ ಗ್ರೇಡ್ 'ಬಿ' ರಿಸರ್ಚ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಉದ್ಯೋಗ ನೀಡಲು ಸಮೃದ್ಧಿ ಯೋಜನೆಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಉದ್ಯೋಗ ನೀಡಲು ಸಮೃದ್ಧಿ ಯೋಜನೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಎಚ್‌ಡಿ ಅನ್ನು ಎಕಾನಾಮಿಕ್ಸ್ ಅಥವ ಫೈನಾನ್ಸ್ ವಿಷಯಗಳಲ್ಲಿ ಮಾನ್ಯತೆ ಪಡೆದ ಭಾರತ ಅಥವ ವಿದೇಶದ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಪಿಜಿಸಿಐಎಲ್16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಪಿಜಿಸಿಐಎಲ್

 Reserve Bank of India recruitment for 14 posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಅಕ್ಟೋಬರ್ 2018ಕ್ಕೆ ಅನ್ವಯವಾಗುವಂತೆ. ಓಬಿಸಿ ಅಭ್ಯರ್ಥಿಗಳಿಗೆ 3 ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

1599 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಐಬಿಪಿಎಸ್1599 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಐಬಿಪಿಎಸ್

ಅರ್ಜಿ ಸಲ್ಲಿಸುವ ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 42150 ರೂ. ತಿಂಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

English summary
Reserve Bank of India (RBI) released a recruitment notification for the posts of Grade 'B' for Research. There are 14 posts candidates should submit application before 30th November 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X