Govt Recruitment: ಕಂದಾಯ ಇಲಾಖೆ ಉದ್ಯೋಗಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿಸುದ್ದಿ, ಬಡ್ತಿ ಪ್ರಕ್ರಿಯೆ ಚುರುಕು

ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯ ಆಡಳಿತ ಸುಧಾರಣೆಗೆ ಸರ್ಕಾರ ಮುಂದಾಗಿದೆ. ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸಹಾಯಕ ಆಯುಕ್ತರಿಗೆ (AC) ಹೆಚ್ಚಿನ ಜವಾಬ್ದಾರಿ ನೀಡಬೇಕು. ಖಾಲಿ ಹುದ್ದೆಗಳ ಭರ್ತಿ ಕುರಿತು ಅಗತ್ಯ ನಿರ್ದೇಶನ ನೀಡಿರುವುದಾಗಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದರು.

ವಿಧಾನಸೌಧದಲ್ಲಿ ಇಂದು ಕಂದಾಯ ಇಲಾಖೆಯ ವಿವಿಧ ಯೋಜನೆಗಳು, ಆಡಳಿತಾತ್ಮಕ ಪ್ರಗತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಾಕಿ ಉಳಿದಿರುವ ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜನರ ಸಮಸ್ಯೆಗಳಿಗೆ ಆದ್ಯತೆ ನೀಡುವುದು ಅದ್ಯತೆ ಆಗಬೇಕೆಂದು ತಿಳಿಸಿದರು.

Revenue Department

ವೃತ್ತಿಪರ ಸಮಸ್ಯೆಗಳಿಗೆ ಪರಿಹಾರ

ಪರವಾನಗಿ ಭೂಮಾಪಕರ ಸಮಸ್ಯೆಗಳ ಕುರಿತು ಗಮನ ಹರಿಸಬೇಕೆಂದು ಸೂಚಿಸಿದ ಅವರು, ಭೂಮಾಪಕರ ಸಭೆಯನ್ನು ಕರೆದು ಅವರ ಅಹವಾಲುಗಳು ಹಾಗೂ ಬೇಡಿಕೆಗಳನ್ನು ಆಲಿಸಬೇಕು. ಭೂಮಾಪಕರ ಸೇವಾ ಹಾಗೂ ವೃತ್ತಿಪರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಂಡು, ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಹೇಳಿದರು.

2037ರ ಬೆಂಗಳೂರು ಕನಸು: 35 ಲಕ್ಷ ರೂ. ಕೋಟಿ ಆರ್ಥಿಕತೆ, 30 ಲಕ್ಷ ಹೊಸ ಉದ್ಯೋಗಗಳ ಗುರಿ
2037ರ ಬೆಂಗಳೂರು ಕನಸು: 35 ಲಕ್ಷ ರೂ. ಕೋಟಿ ಆರ್ಥಿಕತೆ, 30 ಲಕ್ಷ ಹೊಸ ಉದ್ಯೋಗಗಳ ಗುರಿ

ಖಾಲಿ ಹುದ್ದೆಗಳ ನೇಮಕಾತಿ ಭರ್ತಿಗೆ ವೇಗ

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಬೇಕು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಡ್ತಿ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಿಳಂಬ ಉಂಟಾಗಬಾರದು. ಜೇಷ್ಠತಾ ಪಟ್ಟಿಯನ್ನು ಶೀಘ್ರ ಪ್ರಕಟಿಸಬೇಕು. ನಿಯಮಾನುಸಾರ ಪಾರದರ್ಶಕವಾಗಿ ಬಡ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ತ್ವರಿತ ಇ-ಪೌತಿ ಸೇವೆ

ಇ-ಪೌತಿ ಖಾತೆ ಸೇರಿದಂತೆ ಇಲಾಖೆಯ ಎಲ್ಲ ಆನ್‌ಲೈನ್ ಮತ್ತು ಸಾರ್ವಜನಿಕ ಸೇವೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ನಾಗರಿಕರು ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಸೇವೆಗಳ ವಿತರಣೆಯಲ್ಲಿ ದಕ್ಷತೆ ಮತ್ತು ಪಾರದರ್ಶಕತೆ ಕಾಪಾಡುವಂತೆ ತಿಳಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಭೂ ದಾಖಲೆ, ಖಾತೆ ಬದಲಾವಣೆ, ಸರ್ವೇ ಕಾರ್ಯ, ಮ್ಯೂಟೇಷನ್ ಹಾಗೂ ಇತರೆ ಕಂದಾಯ ಸೇವೆಗಳ ವಿಲೇವಾರಿಯಲ್ಲಿ ವಿಳಂಬ ಕಡಿಮೆ ಮಾಡುವ ನಿಟ್ಟಿನಲ್ಲಿ ನಿರಂತರ ಮೇಲ್ವಿಚಾರಣೆ ನಡೆಸಬೇಕು.

ಅಧಿಕಾರಿಗಳು ಇಲಾಖೆಯ ಎಲ್ಲಾ ಕಾರ್ಯಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ಗುರಿ ಸಾಧನೆಯತ್ತ ಗಮನ ಹರಿಸಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವಂತೆ ಹೇಳಿದರು.

ಮಾನಸಿಕ ಒತ್ತಡದಲ್ಲಿದ್ದ ಗ್ರೇಡ್-2 ತಹಶೀಲ್ದಾರ್‌ಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್
ಮಾನಸಿಕ ಒತ್ತಡದಲ್ಲಿದ್ದ ಗ್ರೇಡ್-2 ತಹಶೀಲ್ದಾರ್‌ಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್

ಗ್ರೇಡ್-2 ತಹಶೀಲ್ದಾರ್ ಅಧಿಕಾರಿಗಳಿಗೆ ಬಡ್ತಿ

ಇತ್ತೀಚೆಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಗ್ರೇಡ್-2 ತಹಶೀಲ್ದಾರ್‌ ಅಧಿಕಾರಿಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಕೆಲವು ವರ್ಷಗಳಿಂದ ಈ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ ಇದೀಗ ಅರ್ಹತೆ ಮೇರೆಗೆ ಅನುಸಾರವಾಗಿ ಗ್ರೇಡ್-2 ತಹಶೀಲ್ದಾರ್ ಅಧಿಕಾರಿಗಳಿಗೆ ಗ್ರೇಡ್1 ಅಧಿಕಾರಿಗಳಾಗಿ ಬಡ್ತಿ ನೀಡಲಾಗುತ್ತದೆ ಎಂದು ಖುಷಿ ಸುದ್ದಿ ಹಂಚಿಕೊಂಡಿದ್ದಾರೆ.

ಈ ಮೂಲಕ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವ ಸರ್ಕಾರದ ದೃಢ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಐದು ವರ್ಷದಿಂದ ವೃತ್ತಿಪರತೆ ಮೆರೆದ ಸಮರ್ಥ ಅಧಿಕಾರಿಗಳು ಬಡ್ತಿ ಇಲ್ಲದೇ ಒತ್ತಡದಲ್ಲಿದ್ದರು. ಆ ಪೈಕಿ ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಯಲ್ಲಿ ಮತ್ತಷ್ಟು ಸುಧಾರಣೆಗಳು ಆಗಲಿವೆ, ಬಡ್ತಿ ಪ್ರಕ್ರಿಯೆಗೆ ವೇಗ ನೀಡುವ ಮೂಲಕ ವರ್ಷಗಳಿಂದ ಬಾಕಿ ಉಳಿದಿದ್ದ ಮಹತ್ವದ ಕೆಲಸಗಳಿಗೆ ಸರ್ಕಾರ ಪೂರ್ಣವಿರಾಮ ನೀಡಲು ಮುಂದಾಗಿದೆ. ಇದು ನಮ್ಮ ಸರ್ಕಾರದ ಬದ್ಧತೆ, ಕಾರ್ಯವೈಖರಿ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+