30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಐಟಿಇಎಸ್
ಬೆಂಗಳೂರು, ಆಗಸ್ಟ್ 17 : ಆರ್‌ಐಟಿಇಎಸ್ 30 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 23 ಆಗಸ್ಟ್ 2018 ಕೊನೆಯ ದಿನವಾಗಿದೆ.
ರೈಲ್ ಇಂಡಿಯ ತಾಂತ್ರಿಕ ಮತ್ತು ಆರ್ಥಿಕ ಸೇವಾ ಸಂಸ್ಥೆ (ಆರ್‌ಐಟಿಇಎಸ್) ಡಿಪ್ಯೂಟಿ ಜನರಲ್ ಮ್ಯಾನೇಜರ್, ಸೈಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಡಿಪ್ಯೂಟಿ ಜನರಲ್ ಮ್ಯಾನೇಜರ್ (ಸಿವಿಎಲ್) 10, ಡಿಪ್ಯೂಟಿ ಜನರಲ್ ಮ್ಯಾನೇಜರ್ (ಎಂಇಪಿ ಎಕ್ಸ್‌ಪರ್ಟ್) 8, ಸೈಟ್ ಇಂಜಿನಿಯರ್ (ಸಿವಿಎಲ್) 12 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸುವವರು ಪ್ರಥಮ ದರ್ಜೆಯಲ್ಲಿ ಸಿವಿಎಲ್/ಮೆಕಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
ವಯೋಮಿತಿ : 54 ವರ್ಷಗಳು (1 ಆಗಸ್ಟ್ 2018) ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
ವೇತನ ಶ್ರೇಣಿ : ಡೆಪ್ಯೂಟಿ ಜನರಲ್ ಮ್ಯಾನೇಜರ್ : 70000-200000
ಸೈಟ್ ಇಂಜಿನಿಯರ್ : 40000-140000 ಪ್ರತಿ ತಿಂಗಳು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications